ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ #Murderof a Girl in Hubli ಮಾಡಿದ ಆರೋಪಿಯನ್ನು ಎನ್‌ಕೌಂಟರ್ #Accused encounter by Police ಮಾಡಿದ ಪೊಲೀಸರ ಕ್ರಮ ಹಾಗೂ ಸರ್ಕಾರವನ್ನು ಅಭಿನಂದಿಸುವೆ’ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾನೂನಿನ ಚೌಕಟ್ಟಿನಲ್ಲಿ ಆರೋಪಿಯನ್ನು ಗುಂಡಿಟ್ಟು ಕೊಲ್ಲುವ ಕೆಲಸ ಆಗಿದೆ. ಆದರೆ ಬಾಲಕಿಯ ಕೊಲೆ ಕೃತ್ಯ ಖಂಡನೀಯ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕತೆಯ ಪಾಠ ಮಾಡುವ ಅಗತ್ಯವಿದೆ’ ಎಂದರು.
‘ರಾಜ್ಯದಲ್ಲಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಆರಂಭವಾಗಿದೆ. ಗುರುವಾರ ಸಭೆ ಇದ್ದು, ಈ ಬಗ್ಗೆ ಅಲ್ಲಿ ತೀರ್ಮಾನ ಕೈಗೊಳ್ಳಬಹುದು ಎಂಬ ನಂಬಿಕೆ ಇದೆ. ಮಾಧ್ಯಮಗಳಲ್ಲಿ ಏನು ಬಂದಿದೆ. ಅದನ್ನು ಮಾತ್ರ ನಾವು ಗಮನಿಸುತ್ತಿದ್ದೇವೆ. ರಾಜ್ಯದ ಜನರಿಗೆ ಇದರಿಂದ ಒಳ್ಳೆಯದಾದರೆ ಸಂತೋಷ. ಅದರಲ್ಲಿ ಏನಾದರೂ ಕೊರತೆ ಕಂಡುಬಂದಲ್ಲಿ ಸಂಬಂಧಪಟ್ಟ ವರ್ಗಗಳಿಗೆ ನ್ಯಾಯ ಒದಗಿಸಲು ಬಿಜೆಪಿ ಬದ್ಧ’ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post