ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿರಿಯ ಕೃಷಿಕರು ಹಾಗೂ ತಾಲೂಕಿನ ಓಕ್ಕಲಿಗ ಸಮಾಜದ ಹಿರಿಯರು ಹುಗಲವಳ್ಳಿ ಚಿನ್ನೇಗೌಡರು #Hugalavalli Chinnegowda ವಯೋಸಹಜ ಕಾರಣಗಳಿಂದ ಇಹಲೋಕ ತ್ಯಜಿಸಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾಗಿ ಹಾಗೂ ಹೊದಲ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಚಿನ್ನೇಗೌಡರು ಸರಿಸುಮಾರು 95 ವರ್ಷಗಳ ಸಾರ್ಥಕ ಜೀವನ ನಡೆಸಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥ ಗೌಡರ ಮಾವ ಚಿನ್ನೇಗೌಡರು ನಾಲ್ಕು ಮಕ್ಕಳು (ಎರಡು ಗಂಡು, ಎರಡು ಹೆಣ್ಣು ಮಕ್ಕಳು) ಅಪಾರ ಸಂಖ್ಯೆಯ ಬಂಧು ಮಿತ್ರರನ್ನು ಆಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















