ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಗೋಪಾಲಗೌಡ ಬಡಾವಣೆಯಲ್ಲಿ ವಿದ್ಯುತ್ ಟ್ರಾನ್ಸ್ಫಾಮರ್ #transformer ಮೇಲೆ ಬೃಹತ್ ಮರ ಉರುಳಿಬಿದ್ದ ಘಟನೆ ನದೆದಿದೆ.
ಗೋಪಾಲಗೌಡ ಬಡಾವಣೆಯ ಬಿ ಬ್ಲಾಕ್ ನ 1ನೇ ಮುಖ್ಯ ರಸ್ತೆಯಲ್ಲಿದ್ದ ಬೃಹತ್ ಮರ ಇಂದು ಉರುಳಿಬಿದ್ದಿದೆ.
ಮರ ಬಿದ್ದ ರಭಸಕ್ಕೆ ಟ್ರಾನ್ಸ್ಫಾಮರ್ ಸೇರಿದಂತೆ ಐದು ವಿದ್ಯುತ್ ಕಂಬಗಳು ಜಖಂ ಆಗಿದ್ದು, ಅದೃಷ್ಟವಶತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ರಜೆ ಇದ್ದ ಕಾರಣ ರಸ್ತೆಯಲ್ಲಿ ವಾಹನ ಸಂಚಾರ ಕಡಿಮೆ ಇತ್ತು. ಮರ ಬಿದ್ದ ಸಮಯದಲ್ಲಿ ವಿದ್ಯುತ್ ಇಲ್ಲದ ಪರಿಣಾಮ ದೊಡ್ಡ ಅನಾಹುತ ತಪ್ಪಿದೆ.
ಘಟನೆಯಿಂದ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















