ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವವೇ ಮೆಚ್ಚಿದ ನಾಯಕ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಇಂದು ಬೆಳಿಗ್ಗೆ ತಮಗೆ ಕರೆ ಮಾಡಿ ಮಾತನಾಡಿ, ಅಭಿನಂದನೆ ತಿಳಿಸಿದ್ದು, ತಮ್ಮಲ್ಲಿ ಹೊಸ ಹುರುಪನ್ನು ಮೂಡಿಸಿದೆ ಎಂದು ಮಾಜಿ ಸಚಿವ ಈಶ್ವರಪ್ಪ K S Eshwarappa ಹೇಳಿದರು.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅನಿರೀಕ್ಷಿತವಾಗಿ ಕರೆ ಮಾಡಿ ತಮ್ಮ ನಿಲುವಿನ ಕುರಿತು ಅಭಿನಂದನೆ ತಿಳಿಸಿ, ಪಕ್ಷದ ಗೆಲುವಿಗೆ ಶ್ರಮಿಸುವುವಂತೆ ಮನವಿ ಮಾಡಿ, ರಾಜ್ಯಕ್ಕೆ ಬಂದಾಗ ತಮ್ಮನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಇದರಿಂದ ತಮಗೆ ಅತೀವ ಸಂತಸವಾಗಿದೆ. ಶಿವಮೊಗ್ಗದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಹಾಗೂ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು.
ಪಕ್ಷದ ಮುಖಂಡರ ಸೂಚನೆಯಂತೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದಿರುವ ಬಗ್ಗೆ ರಾಷ್ಟ್ರೀಯ ಹಾಗೂ ಸ್ಥಳೀಯ ನಾಯಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ತಾವು ವಿಶೇಷವಾದದ್ದೇನನ್ನು ಮಾಡಿಲ್ಲ. ಆರ್‌ಎಸ್‌ಎಸ್ ಸಂಘಟನೆಯಲ್ಲಿ ಕಲಿತ ಸಂಸ್ಕಾರವನ್ನು ಪಾಲನೆ ಮಾಡಿದ್ದೇನೆ. ಇದಕ್ಕೆ ಸಿಕ್ಕಿರುವ ಪ್ರತಿಕ್ರಿಯೆ ತಮಗೆ ಸಂತಸವಾಗಿದೆ ಹಾಗೂ ಜಗದೀಶ್ ಶೆಟ್ಟರ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ನೋವುಂಟು ಮಾಡಿತು ಎಂದರು.
ತಾನು ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತಿ ಪಡೆದಿದ್ದೇನೆಯೇ ಹೊರತು ರಾಜಕೀಯ ನಿವೃತ್ತಿ ಪಡೆದಿಲ್ಲ. ಜೀವನ ಪರ್ಯಂತ ಪಕ್ಷದ ಸಂಘಟನಾ ರಾಜಕಾರಣವನ್ನು ಮುಂದುವರೆಸುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post