ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೇ 10ರಂದು ನಡೆಯಲಿರುವ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ನಾನು ಸ್ಪರ್ಧಿಸಲಿದ್ದು, ಪಕ್ಷ ಯಾವುದು ಎಂಬುದನ್ನು ಕಾದು ನೋಡಿ ಎಂದು ಎಂಎಲ್’ಸಿ ಆಯನೂರು ಮಂಜುನಾಥ್ ಕುತೂಹಲ ಕೆರಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಾನು ಈಗಲೂ ಚುನಾವಣಾ ಸ್ಪರ್ಧಾಕಾಂಕ್ಷಿಯಾಗಿದ್ದೇನೆ. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಯಾವುದೇ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಇನ್ನೂ ಘೋಷಣೆಯಾಗಿಲ್ಲ. ನಾನು ಸ್ಪರ್ಧಿಸುವುದು ನಿಶ್ಚಿತ. ಆದರೆ, ಯಾವ ಪಕ್ಷದಿಂದ ಎಂಬುದನ್ನು ಕಾದು ನೋಡಿ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















