No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಳೆದ ಬಾರಿಗಿಂತ ಹೆಚ್ಚಿನ ಮತದ ಅಂತರದಿಂದ ಗೆಲ್ಲತ್ತೇನೆ: ಸಂಸದ ರಾಘವೇಂದ್ರ ವಿಶ್ವಾಸ

kalpa News by kalpa News
May 8, 2024
in ಶಿವಮೊಗ್ಗ
0
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸುವ ವಿಶ್ವಾಸವಿದೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಕಾರಣಕರ್ತರಾದ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಅನೇಕ ವಿಶೇಷತೆಗಳಿಂದ ಕೂಡಿತ್ತು. ವಿಕಸಿತ ಭಾರತಕ್ಕೋಸ್ಕರ ಮತದಾನ ಮಾಡಿದ ಮತದಾರರಿಗೆ ಧನ್ಯಾದಗಳನ್ನು ಸಲ್ಲಿಸುತ್ತೇನೆ ಎಂದರು.
ಒಂದು ದಶಕದಿಂದ ಇಡೀ ವಿಶ್ವವೇ ಬೆರಗಾಗುವಂತೆ ದೇಶಕ್ಕೆ ಶಕ್ತಿಯುತ ಹಾಗೂ ಅಭಿವೃದ್ಧಿ ಮಾಡಿ ವಿಶ್ವಕೇಂದ್ರವನ್ನಾಗಿ ಮಾಡಲು ಮತ್ತೊಮ್ಮೆ  ಮೋದಿ #Modi ಸರ್ಕಾರ ಘೋಷಣೆಯಡಿ ಸಹಕಾರ ನೀಡಲು ಕೈ ಜೋಡಿಸಿದ್ದಕ್ಕಾಗಿ ಮತ್ತೊಮ್ಮೆ ಮತದಾರರಿಗೆ ಕೃತಜ್ಞತೆಗಳು ಎಂದರು.

ಭಾರತದ ಏಳಿಗೆಗೆ ಶ್ರಮ ವಹಿಸಿದ ಸಂಘಟನೆ ಕಾರ್ಯಕರ್ತರಿಗೆ ಅಭಿನಂದನೆಗಳು. 1952ರಿಂದ 2024ರವರೆಗೆ ಒಟ್ಟು 18 ಬಾರಿ ಲೋಕಸಭೆ ಚುನಾವಣೆಗಳು ನಡೆದಿದ್ದು 1952ರಲ್ಲಿ ಶೇ. 75.14 ರಷ್ಟು ಮತದಾನವಾಗಿದ್ದನ್ನು ಬಿಟ್ಟರೆ 2024ರ ಚುನಾವಣೆಯಲ್ಲಿ ಶೇ. 78.31ರಷ್ಟು ಮತದಾನವಾಗಿರುವುದು ದಾಖಲೆಯಾಗಿದೆ ಎಂದರು.
ಶಾಂತಿಯುತವಾಗಿ ಮತದಾನವಾಗಲು ಕಾರ್ಯಕರ್ತರು ಸಂಘಟನಾತ್ಮಕವಾಗಿ ಹಾಗೂ ಕುಟುಂಬದ ರೀತಿಯಲ್ಲಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಾರೆ. ಅದೇ ರೀತಿ ಮೈತ್ರಿಕೂಟದ ಜೆಡಿಎಸ್ ಪಕ್ಷದ ಶ್ರಮ, ಕೆಲವು ಎನ್.ಜಿ.ಒ.ಗಳು ಸಹ ಕೈಜೋಡಿಸಿವೆ. ಹೊರ ದೇಶ, ವಿವಿಧ ರಾಜ್ಯಗಳು ಹಾಗೂ ರಾಜ್ಯದ ವಿವಿಧೆಡೆ ನೆಲೆಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರು ಸಹ ಮತದಾನ ಮಾಡಿರುವುದರಿಂದ ಶೇಕಡವಾರು ಹೆಚ್ಚಳಕ್ಕೆ ಕಾರಣವಾಗಿದೆ ಎಂದರು.

ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ವಿವಿಧ ಮೋರ್ಚಾಗಳು, ಮಹಾ ಶಕ್ತಿ ಕೇಂದ್ರ, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಸಭೆಗಳನ್ನು ಬೈಂದೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಸಭೆಗಳು ನಡೆದಿವೆ. ಪರಿವಾರ ಶಕ್ತಿ ತುಂಬಿದೆ. ಎಲ್ಲಿಯೂ ವ್ಯತ್ಯಾಸವಾಗದಂತೆ ನೋಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಹಾಗೂ ಮೋದಿಜೀಯವರ ಗ್ಯಾರಂಟಿ, ಹಿಂದುತ್ವ, ದೇಶದ ರಕ್ಷಣೆ ನೋಡಿ ಮತದಾರರು ಪಕ್ಷವನ್ನು ಬೆಂಬಲಿಸಿದ್ದಾರೆ ಎಂದರು.
ಈಶ್ವರಪ್ಪನವರು #Eshwarappa ನೆನ್ನೆ ನನ್ನ ಬಗ್ಗೆ ದೂರು ನೀಡಿದ ವಿಷಯ ತಿಳಿಯಿತು. ನಾನು ಆಗ ಆನಂದಪುರದಲ್ಲಿದ್ದೆ ನನಗೆ ಆಶ್ಚರ್ಯವಾಯಿತು. ಇದನ್ನು ನಾನು ಕೂಡಲೇ ಪರಿಶೀಲನೆ ಮಾಡಿದೆ, ಇದು ಸುಳ್ಳು ಸುದ್ಧಿಯಾಗಿದ್ದು, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇದು ನಿರಾಧರವಾದ ಆರೋಪವಾಗಿದೆ ಎಂದರು.

Also read: ಪೆನ್ ಡ್ರೈವ್ ಹಗರಣ ಕಾಂಗ್ರೆಸ್ ನವರ ಇನ್ನೊಂದು ಮುಖ: ಬಂಡೆಪ್ಪ ಖಾಶೆಂಪುರ್

ಒಟ್ಟಾರೆಯಾಗಿ ನನಗೆ ಬಂದ ಮಾಹಿತಿ ಪ್ರಕಾರ ಕಳೆದ ಬಾರಿಗಿಂತ ಹೆಚ್ಚಿನ ಮತದ ಅಂತರದಿಂದ ಶಿವಮೊಗ್ಗದಲ್ಲಿ ಗೆಲ್ಲತ್ತೇನೆ. ರಾಜ್ಯದಲ್ಲಿ ಕೂಡ 25ಕ್ಕೂ ಹೆಚ್ಚಿನ ಸ್ಥಾನ ಬಿಜೆಪಿ ಮೈತ್ರಿಕೂಟಕ್ಕೆ ಬರಲಿದೆ. ಈ ಚುನಾವಣೆಯಲ್ಲಿ ದೇಶ ವಿದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಸಹಕಾರ ನೀಡಿದ್ದಾರೆ. ಅವರಿಗೂ ಧನ್ಯವಾದ ಸಮರ್ಪಿಸುತ್ತೇನೆ. ಪ್ರಧಾನಿ ಮೋದಿಯವರಿಂದ ಪ್ರಾರಂಭವಾದ ಚುನಾವಣಾ ಪ್ರಚಾರದಲ್ಲಿ ರಾಷ್ಟ್ರೀಯ ಅಧ್ಯಕ್ಷ ನಡ್ಡಜೀ, ಅಣ್ಣಾಮಲೈ, ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್, ಬಿ.ವೈ.ವಿಜಯೇಂದ್ರ, ನಟಿ ತಾರಾ, ಶೃತಿ, ಲೋಕಸಭಾ ಉಸ್ತುವಾರಿಯಾಗಿ ರಘುಪತಿಭಟ್, ರಾಷ್ಟ್ರೀಯ ಕಾರ್ಯದರ್ಶಿ ರಾಧಮೋಹನ್‍ದಾಸ್ ಅಗರ್‍ವಾಲ್, ಮೈಸೂರು ಕ್ಷೇತ್ರದ ಶಾಸಕರು ಮತ್ತು ಚಾಮರಾಜ್ ನಗರದ ಅಭ್ಯರ್ಥಿ ಬಾಲರಾಜ್ ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಪ್ರಚಾರ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದ ಸಮರ್ಪಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಮಾಜಿ ಶಾಸಕರಾದ ಎಂ.ಬಿ. ಭಾನುಪ್ರಕಾಶ್, ಕೆ.ಬಿ. ಅಶೋಕ್ ನಾಯ್ಕ್, ಪ್ರಮುಖರಾದ ಎಸ್. ಜ್ಞಾನೇಶ್ವರ್, ಎಸ್. ದತ್ತಾತ್ರಿ, ರಾಜಶೇಖರ್, ಸಿ.ಹೆಚ್. ಮಾಲತೇಶ್, ಎನ್.ಜೆ. ರಾಜಶೇಖರ್, ಶಿವರಾಜ್ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

     

Tags: B Y RaghavendraEshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsModiNews in KannadaNews KannadaShimogaShivamogga Newsಈಶ್ವರಪ್ಪಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಮೋದಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆ SSLC ರಿಸಲ್ಟ್ | ಫಲಿತಾಂಶ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

Next Post

ಪ್ರಜ್ವಲ್ ಪ್ರಕರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪ

kalpa News

kalpa News

Next Post
ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಪ್ರಜ್ವಲ್ ಪ್ರಕರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL