ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಾನು ಪಕ್ಷೇತರವಾಗಿ ಸ್ಪರ್ಧಿಸಿದ್ದು ಗೆದ್ದರೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಲು ಶ್ರಮಿಸುತ್ತೇನೆ ಎಂದು ಅಭ್ಯರ್ಥಿ ಟಿ. ಭಾಸ್ಕರಶೆಟ್ಟಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರ ಕ್ಷೇತ್ರವನ್ನು ಶಿಕ್ಷಕರಲ್ಲದವರು ಆವರಿಸಿಕೊಳ್ಳಬಾರದು, ಅವರಿಗೆ ಶಿಕ್ಷಕರ ಸಮಸ್ಯೆಗಳೇ ಗೊತ್ತಿರುವುದಿಲ್ಲ. ನಾನು 30 ವರ್ಷಗಳಿಂದ ಶಿಕ್ಷಕ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ಆದ್ದರಿಂದ ಶಿಕ್ಷಕರು ಯಾವುದೇ ರಾಷ್ಟ್ರೀಯ ಪಕ್ಷಗಳ ಆಮೀಷಗಳು ಒಳಗಾಗಿ ಕೆಲಸ ಮಾಡುವ ವ್ಯಕ್ತಿಯನ್ನು ಬೆಂಬಲಿಸಬೇಕು ಎಂದರು.
Also read: ಸ್ಮಾರ್ಟ್‌ಸಿಟಿ ಆಶಾ ಭಾವನೆ ಈಗ ಹುಸಿ, ನ್ಯಾಯಾಂಗ ತನಿಖೆ ಆಗಲಿ | ಕೆ.ಬಿ. ಪ್ರಸನ್ನಕುಮಾರ್ ಆಗ್ರಹ
ಪಠ್ಯಪುಸ್ತಕಗಳು ಸರಿಯಾದ ಸಮಯಕ್ಕೆ ಸಿಗಬೇಕು. ಪರೀಕ್ಷಾ ಪದ್ಧತಿಯಲ್ಲಿ ಲೋಪಗಳಿದ್ದು, ಅದನ್ನು ಸರಿಪಡಿಸಬೇಕು, ಮುಖ್ಯವಾಗಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಯಾಗಬೇಕು. ಶಿಕ್ಷಕರ ಸಮಸ್ಯೆಗಳಿಗೆ ಪರಿಷತ್‍ನಲ್ಲಿ ಗಟ್ಟಿಧ್ವನಿ ಎತ್ತಬೇಕು. ಈ ಎಲ್ಲಾ ಕಾರಣಗಳಿಂದ ನಾನು ಸ್ಪರ್ಧಿಸಿದ್ದು ಶಿಕ್ಷಕರು ನನ್ನನ್ನು ಗೆಲ್ಲಿಸಿ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ಸುಬ್ಬಣ್ಣ ಶೆಟ್ಟಿ, ಡಾ.ಶ್ರೀನಿವಾಸ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post