No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Saturday, March 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ: ಡಿಸಿ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 10, 2025
in ಶಿವಮೊಗ್ಗ
0
ಈ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ: ಡಿಸಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತೀರ್ಥಹಳ್ಳಿ, ಹೊಸನಗರ, ಸಾಗರ ಮಲೆನಾಡು ತಾಲೂಕುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಕಂಡುಬರುವ ಮಂಗನಕಾಯಿಲೆಯ ನಿಯಂತ್ರಣಕ್ಕೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್‌, ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಪ್ರಾಥಮಿಕ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಂಗನ ಕಾಯಿಲೆ ಬಾದಿತ ಪ್ರದೇಶಗಳಲ್ಲಿ ಉಣುಗುಗಳ ನಿಯಂತ್ರಣ ಕುರಿತು ಸರ್ವೇಕ್ಷಣೆ, ಮಂಗಗಳ ಅಸಹಜ ಸಾವಿನ ಕುರಿತು ಸರ್ವೇಕ್ಷಣೆ ಹಾಗೂ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜ್ವರ ಸಮೀಕ್ಷೆ ಮಾಡುವಂತೆ ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಿ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

ಮಲೆನಾಡು ಭಾಗಗಳ ಅರಣ್ಯ ಪ್ರದೇಶಗಳಲ್ಲಿ ಸುತ್ತಾಡುವ ಸಾರ್ವಜನಿಕರು, ರೈತರು ಸುರಕ್ಷತಾ ಕ್ರಮವಾಗಿ ಆರೋಗ್ಯ ಇಲಾಖೆಯು ಉಚಿತವಾಗಿ ಒದಗಿಸುವ ಡೀಪಾ ತೈಲವನ್ನು ಲೇಪಿಸಿಕೊಳ್ಳುವಂತೆ ಸೂಚಿಸಿದ ಅವರು, ಜ್ವರ, ಶೀತ, ತಲೆನೋವು, ವಾಂತಿ, ಮೈಕೈ ನೋವು, ನವೆ ಮುಂತಾದ ಅಹಜವಾಗಿರುವ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣದಲ್ಲಿ ಸ್ಥಳೀಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಸಕಾಲಿಕವಾಗಿ ಸೂಕ್ತ ಚಿಕಿತ್ಸೆಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಯಾವುದೇ ವ್ಯಕ್ತಿ ಸೋಂಕಿಗೆ ತುತ್ತಾಗಿರುವ ಲಕ್ಷಣಗಳು ಕಂಡುಬಂದಲ್ಲಿ ಅಂತಹ ವ್ಯಕ್ತಿಯ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ದಿನದ 24ಗಂಟೆಯೊಳಗಾಗಿ ವರದಿ ಪಡೆದು, ಸೂಕ್ತ ಚಿಕಿತ್ಸೆ ನೀಡುವಂತೆ ಎಲ್ಲಾ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಅವರು, ಸೋಂಕಿನ ನಿಯಂತ್ರಣದಲ್ಲಿ ಸ್ಥಳೀಯರ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದುಕೊಳ್ಳಬೇಕು ಎಂದ ಅವರು, ಡೀಪಾ ತೈಲವು ಮಂಗನ ಕಾಯಿಲೆ ಮಾತ್ರವಲ್ಲ ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೂ ಸಹಕಾರಿಯಾಗಲಿದೆ ಎಂದರು.

ಮಂಗನ ಕಾಯಿಲೆಯ ನಿಯಂತ್ರಣ ಕ್ರಮದ ಭಾಗವಾಗಿ ಸ್ಥಳೀಯ ಜನರಲ್ಲಿ ಅರಿವು ಮೂಡಿಸಬೇಕು. ಅದಕ್ಕಾಗಿ ಗ್ರಾಮ ಪಂಚಾಯಿತಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದುಕೊಳ್ಳಬೇಕು. ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯೊಳಗಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಗ್ರಾಮೀಣ ಜನರೂ ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಅಹಜವಾಗಿ ಮಂಗಗಳ ಸಾವು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಿ ಸಹಕರಿಸಿ.
– ಎನ್.ಹೇಮಂತ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿವಮೊಗ್ಗ.

ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆಗಳನ್ನು ಕರೆದು, ಅಗತ್ಯ ಕ್ರಮಗಳನ್ನು ನಿರ್ವಹಿಸಲು ಇಲಾಖೆಯ ಅಧೀನ ಅಧಿಕಾರಿ-ಸಿಬ್ಬಂಧಿಗಳಿಗೆ ಸೂಚನೆ ರವಾನಿಸಬೇಕು ಎಂದ ಅವರು, ಸಮಸ್ಯಾತ್ಮಕ ಪ್ರದೇಶಗಳನ್ನು ಗುರುತಿಸಿ, ವಿಶೇಷ ಗಮನಹರಿಸುವ ಮೂಲಕ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಯಾವುದೇ ಸಾವು-ನೋವುಗಳು ಸಂಭವಿಸದಂತೆ ಕ್ರಮ ವಹಿಸಬೇಕು. ಕಾಯಿಲೆಯ ನಿಯಂತ್ರಣಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಸೂಚಿಸಿದರು.

ಜಿಲ್ಲೆಯಲ್ಲಿ ಬಾಣಂತಿ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅದಕ್ಕೆ ಸೂಕ್ತ ಕಾರಣಗಳನ್ನು ಗುರುತಿಸಿ, ನಿಯಂತ್ರಣ ಕ್ರಮ ಅನುಸರಿಸಬೇಕಾದ ಅಗತ್ಯವಿದೆ. ಆದ್ದರಿಂದ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೃತರಾದ ಗರ್ಭಿಣಿ, ಬಾಣಂತಿ ಸಾವಿನ ಪ್ರಕರಣಗಳ ಕುರಿತು ತಜ್ಞ ವೈದ್ಯಾಧಿಕಾರಿಗಳ ತಂಡವನ್ನು ರಚಿಸಿ, ಪರಿಶೀಲನೆ ನಡೆಸಿ, ಮುಂದಿನ 15ದಿನಗಳೊಳಗಾಗಿ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಲಾಗಿದೆ.

– ಗುರುದತ್ತ ಹೆಗಡೆ, ಜಿಲ್ಲಾಧಿಕಾರಿಗಳು, ಶಿವಮೊಗ್ಗ.

ಕಳೆದ ಜನವರಿ ಮಾಹೆಯಿಂದೀಚೆಗೆ ಜಿಲ್ಲೆಯಲ್ಲಿ 7380ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, 76ಪ್ರಕರಣಗಳನ್ನು ಗುರುತಿಸಿ, ಸಕಾಲಿಕವಾಗಿ ಚಿಕಿತ್ಸೆ ನೀಡಲಾಗಿದೆ. ಎರಡು ಜೀವಹಾನಿ ಪ್ರಕರಣಗಳು ದಾಖಲಾಗಿವೆ. ಅಸಹಜವಾಗಿ 185 ಮಂಗಗಳ ಸಾವನ್ನೂ ಗುರುತಿಸಿ, ಎಚ್ಚರಿಕೆ ಕ್ರಮ ವಹಿಸಲಾಗಿದೆ. ಅಲ್ಲದೆ ಸರ್ಕಾರದ ಮಾರ್ಗಸೂಚಿಯಂತೆ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಜಿಲ್ಲಾ ಮೆಗ್ಗಾನ್‌ಬೋಧನಾ ಆಸ್ಪತ್ರೆ, ಸುಬ್ಬಯ್ಯ ಮೆಡಿಕಲ್‌ಕಾಲೇಜು ಮತ್ತು ಕೆ.ಎಂ.ಸಿ. ಮಣಿಪಾಲ್‌ನಲ್ಲಿ ಒಳರೋಗಿಯಾಗಿ ದಾಖಲಾದ ಪ್ರಕರಣಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದವರು ತಿಳಿಸಿದರು.

ಜಿಲ್ಲಾಡಳಿತವು ಅರಣ್ಯ, ಆರೋಗ್ಯ, ಕಂದಾಯ, ಪಶುಸಂಗೋಪನೆ, ಪಂಚಾಯತ್‌ರಾಜ್‌ಇಲಾಖೆಗಳ ಸಹಯೋಗದೊಂದಿಗೆ ಎಲ್ಲಾ ರೀತಿಯ ಮುಂಜಾಗ್ರತಾ ನಿಯಂತ್ರಣ ಕ್ರಮ ವಹಿಸಲಾಗಿದೆ ಎಂದ ಅವರು ಮಂಗನಕಾಯಿಲೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಈ ನಿಯಂತ್ರಣ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಲ್ಸ್‌ಪೋಲಿಯೋ ಕಾರ್ಯಕ್ರಮದ ಮೊದಲ ಸುತ್ತಿನ ಲಸಿಕಾ ಆಂದೋಲನವು ಡಿಸೆಂಬರ್‌21ರ ಭಾನುವಾರದಂದು ಬೆಳಿಗ್ಗೆ 8 ರಿಂದ ಸಂಜೆ 5ಗಂಟೆಯವರೆಗೆ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.

http://kalpa.news/wp-content/uploads/2024/04/VID-20240426-WA0008.mp4

ಜಿಲ್ಲೆಯಾದ್ಯಂತ 5ವರ್ಷದೊಳಗಿನ 1,23,338 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, 1016ಬೂತ್‌ಗಳನ್ನು ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. 1905ತಂಡಗಳನ್ನು ನೇಮಿಸಿದ್ದು, 193ಜನರನ್ನು ಉಸ್ತುವಾರಿಗಾಗಿ ನಿಯೋಜಿಸಲಾಗಿದೆ. ಈ ಮಹತ್ವದ ಕಾರ್ಯದಲ್ಲಿ ಭಾಗವಹಿಸುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲು ಸೂಚಿಸಲಾಗಿದೆ ಎಂದರು.

ಈ ಲಸಿಕಾ ಆಂದೋಲನ ನಡೆಯಲಿರುವ ಅವಧಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಲಸಿಕೆ ಹಾಕಲು ಮಾಹಿತಿ ನೀಡಿ, ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸುವಲ್ಲಿ ಶ್ರಮಿಸುವಂತೆ ಸೂಚಿಸಿದ ಅವರು, ನಿಗಧಿಪಡಿಸಲಾಗಿರುವ ದಿನಕ್ಕೂ ಮುನ್ನವೇ ಜನರಲ್ಲಿ ಅರಿವು ಮೂಡಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್‌, ಡಾ. ನಾಗರಾಜ್‌ನಾಯ್ಕ್‌, ಡಾ. ಸಿದ್ಧನಗೌಡಪಾಟೀಲ್‌, ಡಾ. ಮಲ್ಲಪ್ಪ, ಡಾ. ಸ್ಮೃತಿ ಸಿ.ರಾಜ್‌, ಡಾ. ಅನುಷಾ ಜಿ.ಕೆ., ಡಾ. ಶಾಂತಕುಮಾರ್‌, ಡಾ.ಪ್ರಶಾಂತ್‌, ಡಾ.ನಾರಾಯಣ್‌ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಗುರುವಿನ ಸ್ಥಾನ ಬಹಳ ದೊಡ್ಡದು | ಹಿರಿಯ ಸಂಗೀತ ವಿದುಷಿ ಮಹಾಲಕ್ಷ್ಮೀ ನಟರಾಜನ್ ಅಭಿಮತ

Next Post

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನಕ್ಕೆ ಅಸ್ತ್ರಗಳ ಬಳಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನಕ್ಕೆ ಅಸ್ತ್ರಗಳ ಬಳಕೆ

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನಕ್ಕೆ ಅಸ್ತ್ರಗಳ ಬಳಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

March 14, 2026
ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

March 14, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಗಮನಿಸಿ! ಮಾರ್ಚ್ 14-15ರಂದು ಶಿವಮೊಗ್ಗದ ಈ ಎಲ್ಲ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL