ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಾಡದೇವತೆ ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಮತ್ತು ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಸೂಕ್ತ ಬಂದೋಬಸ್ತ್ ಮಾಡಿ ಮಹಿಳೆಯರ ಮಾನ ಪ್ರಾಣ ರಕ್ಷಣೆ ಮಾಡಬೇಕೆಂದು ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಮನವಿ ಮಾಡಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ದೇಶದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಮರುಕಳಿಸುತ್ತಿದ್ದು, ರಾಜ್ಯದ ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಬೆಟ್ಟದ ತಪ್ಪಲಿನ ಲಲಿತಾದ್ರಿ ಪುರದ ನಿರ್ಜನ ಪ್ರದೇಶದಲ್ಲಿ ಆರು ಜನ ಮದ್ಯ ವ್ಯಸನಿಗಳ ಗುಂಪು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವುದು, ರಾಜ್ಯದಲ್ಲಿ ಮಹಿಳೆಯರ ರಕ್ಷಣೆ ಕುರಿತು ಪ್ರಶ್ನೆ ಉಂಟಾಗಿದೆ. ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಸ್ಥಿತಿ ಉಂಟಾಗಿದ್ದು, ಈ ಕೂಡಲೇ ಅತ್ಯಾಚಾರ ಮಾಡಿರುವ ಕಾಮುಕರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದೆ.
ರಾಜ್ಯದ ಪ್ರವಾಸಿ ತಾಣಗಳಲ್ಲಿ ಗಿರಿಧಾಮಗಳಲ್ಲಿ ಬೆಟ್ಟ ಗುಡ್ಡದ ಮೇಲಿರುವ ದೇವಾಲಯಗಳ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಹೆಚ್ಚಿಸಿ, ಅಲ್ಲಿ ಮದ್ಯವ್ಯಸನಿಗಳು ಹಾಗೂ ಕಾಮುಕರ ಚಟುವಟಿಕೆಯನ್ನು ತಡೆಗಟ್ಟಿ ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ಮಾಡಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಕೆ. ಶೇಖರ್, ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ, ಖಜಾಂಚಿ ಶಿವಮೊಗ್ಗ ವಿನೋದ್, ಉಪಾಧ್ಯಕ್ಷ ಚಂದನ್, ನಗರ ಘಟಕದ ಉಪಾಧ್ಯಕ್ಷ ವೆಂಕಟೇಶ್, ಸಮಿತಿಯ ಸದಸ್ಯರಾದ ಮಲ್ಲಪ್ಪ, ಸಾಗರ್, ನವೀನ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post