ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿರಂತರ ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಜೈನ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಪ್ರಿಯದರ್ಶಿನಿ ಹೇಳಿದರು.
ಜೈನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯೋಗ ಮಾಡುವುದರಿಂದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿವರಿಸಿದರು.
ನಂತರ ವಿದ್ಯಾರ್ಥಿಗಳು ತಾವು ಕಲಿತ ಯೋಗವನ್ನು ಅತ್ಯಂತ ಆಸಕ್ತಿ ಮತ್ತು ಉತ್ಸಾಹ ಪ್ರದರ್ಶನ ಮಾಡಿದರು. ಜೈನ್ ಪಬ್ಲಿಕ್ ಶಾಲೆಯ ಶೈಕ್ಷಣಿಕ ಮುಖ್ಯಸ್ಥೆ ಮಾಲತಿ, ಶೈಕ್ಷಣಿಕ ಸಂಯೋಜಕರಾದ ಪ್ರತಿಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
Also read: ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಪ್ರಿಯದರ್ಶಿನಿ, ಸಂಯೋಜಕಿ ದಿವ್ಯಶೆಟ್ಟಿ, ಸಿಒಒ ಸುಮಂತ್, ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ವರ್ಗದವರು ಪಾಲ್ಗೊಂಡಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















