ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಪಟ್ಟಂತೆ ರೈಲಿಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಲಿಸುವ ರೈಲಿನಿಂದ ಯುವಕನೋರ್ವ (22) ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಶಿವಪುರ – ಬೀರೂರು ರೈಲು ನಿಲ್ದಾಣಗಳ ನಡುವಿನ ಪ್ರದೇಶದಲ್ಲಿ ಈ ದುರಂತ ಸಂಭವಿಸಿದ್ದು, ರೈಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಚಿಕಿತ್ಸೆಗಾಗಿ ಬೀರೂರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.
Also read: ಬೆಂಗಳೂರಿನಲ್ಲಿ ಅ.27ರಿಂದ ಮೂರು ದಿನಗಳ “ತಿಂಡಿಪೋತರ ಹಬ್ಬ”
ಇನ್ನೊಂದು ಪ್ರಕರಣದಲ್ಲಿ ಚಲಿಸುವ ರೈಲಿಗೆ ಸಿಲುಕಿ ಅನಾಮಧೇಯ ಪುರುಷ (45) ಮೃತಪಟ್ಟ ಘಟನೆ ಶಿವಮೊಗ್ಗದ ವಿದ್ಯಾನಗರ ಸಮೀಪ ನಡೆದಿದೆ. ಭದ್ರಾವತಿಯಿಂದ ಶಿವಮೊಗ್ಗದೆಡೆಗೆ ಆಗಮಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತಪಟ್ಟಿರುವ ಇಬ್ಬರ ಶವವನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿ ಇರಿಸಲಾಗಿದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹದು ಎಂದು ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post