ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾದಿಂದ ಕುಸಿದಿರುವ ಕೈಗಾರಿಕೆಗಳ ಪುನಶ್ಚೇತನಕ್ಕೆ ರಾಜ್ಯ ಸರಕಾರದ ಪೂರಕವಾಗುವಂತಹ ಬಜೆಟ್ ಘೋಷಣೆಗಳನ್ನು ಮಾಡಿದ್ದು, ಕೈಗಾರಿಕೆಯ ಆರ್ಥಿಕ ಪುನಶ್ಚೇತನ ಇದರಿಂದ ಸಾಧ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಸಂಯೋಜಿತ ಕೈಗಾರಿಕ ಟೌನ್‌ಶಿಪ್ ಯೋಜನೆ ಅಡಿಯಲ್ಲಿ. ಬೆಂಗಳೂರು ಚೆನ್ನೈ ಮತ್ತು ಬೆಂಗಳೂರು-ಮುಂಬೈ ಕಾರಿಡಾರ್‌ನ ಎರಡು ಕಡೆ ತಲಾ ಕನಿಷ್ಠ 500 ಎಕರೆ ಜಾಗದಲ್ಲಿ ಮುಖ್ಯಮಂತ್ರಿಗಳ ಸಂಯೋಜಿತ ಕೈಗಾರಿಕಾ ಟೌನ್ ಶಿಪ್ ಸ್ಥಾಪನೆ. ಹಾಗೂ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ. ರಾಜ್ಯ ಸಣ್ಣ ಕೈಗಾರಿಕ ಅಭಿವೃದ್ಧಿ ನಿಗಮಗಳ ಉಸ್ತುವಾರಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದಿದ್ದಾರೆ.
ಮುಂದಿನ ಮೂರು ವರ್ಷಗಳಲ್ಲಿ 10 ಸಾವಿರ ಕೋಟಿ ಬಂಡವಾಳ ಆಕರ್ಷಣೆ ಹಾಗೂ 5 ಲಕ್ಷ ಉದ್ಯೋಗಾವಕಾಶ ಸೃಷ್ಟಿಯ ನಿರೀಕ್ಷೆಯನ್ನು ಹೊಂದಲಾಗಿದೆ. ಟೌನ್ ಶಿಪ್ ಸ್ಥಾಪನೆಯ ಮೂರನೇ ಹಂತದಲ್ಲಿ ಶಿವಮೊಗ್ಗವೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 100 ಎಕರೆಯ ಜಾಗದಲ್ಲಿ 8 ಕೈಗಾರಿಕ ಪಾರ್ಕ್ ಸ್ಥಾಪನೆಯ ಉದ್ದೇಶ ಹೊಂದಿದೆ. ಹಾಗೂ ಪೀಣ್ಯ ಕೈಗಾರಿಕಾ ಟೌನ್ ಶಿಪ್ ಸ್ಥಾಪನೆ ಹಾಗೂ ಮೂಲಸೌಕರ್ಯಕ್ಕೆ 100 ಕೋಟಿ ರೂ. ಅನುದಾನ ನೀಡಿದೆ ಎಂದು ಹೇಳಿದ್ದಾರೆ.
ಉದ್ಯೋಗಾವಕಾಶಗಳ ಸೃಷ್ಟಿಗೆ, ರಾಜ್ಯದ ಆರ್ಥಿಕ ಬೆಳವಣಿಗೆಗೆ, ಎಂಎಸ್‌ಎಂಇ ವಲಯದಿಂದ ಅಧಿಕ ಜಿಎಸ್‌ಟಿ ಮತ್ತು ಇತರೆ ತೆರಿಗೆಗಳ ಆದಾಯದಿಂದ ರಾಜ್ಯದ ಬೆಳವಣಿಗೆಗೆ ಈ ಯೋಜನೆಯು ಪೂರಕವಾಗಿದ್ದು, ಕೈಗಾರಿಕಾ ಉದ್ದೇಶಕ್ಕೆ ಭೂಮಿ, ಕಾರ್ಮಿಕರಿಗೆ ವಸತಿ ಯೋಜನೆ, ವ್ಯಾಪಾರ ವಹಿವಾಟಿಗೆ ವಾಣಿಜ್ಯ ಸ್ಥಳಾವಕಾಶ, ಖಾಸಗಿ ಹೂಡಿಕೆ ಸಂಸ್ಥೆಗಳಿಂದ ಬಂಡವಾಳ ಹೂಡಿಕೆ ಸಿಎಂಐಐಟಿಪಿ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಬಜೆಟ್‌ನಲ್ಲಿ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ 6 ಸಾವಿರ ಸಣ್ಣ ಉದ್ಯಮ ಸ್ಥಾಪನೆಗೆ ಬೆಂಬಲ. ಮತ್ತು 60 ಸಾವಿರ ಮಹಿಳೆಯರಿಗೆ ಉದ್ಯೋಗ, ಸಣ್ಣ ಉದ್ಯಮಗಳಿಗೆ ತಾಂತ್ರಿಕ ನೆರವು. 2,266 ಕಿರು ಉದ್ದಿಮೆಗಳ ಮೂಲಕ 25 ಸಾವಿರ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಯಾದವಗಿರಿ ಕಡೇಚೂರಿನಲ್ಲಿ 1,478 ಕೋಟಿ ವೆಚ್ಚದ ಬಲ್ಕ್ ಡ್ರಗ್ ಪಾರ್ಕ್ ನಿರ್ಮಾಣ ಸೇರಿದಂತೆ ಹಲವು ಉಪಯುಕ್ತ ಯೋಜನೆಗಳನ್ನು ಮಂಡಿಸಲಾಗಿದೆ ಎಂದು ವಿವರಿಸಿದ್ದಾರೆ.
ಮಂಗಳೂರಿನಲ್ಲಿ 66 ಕೋಟಿ ವೆಚ್ಚದ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಮತ್ತು ಬೀದರ್‌ನ ಕೃಷಿ ಉಪಕರಣ ತಯಾರಿಕಾ ಕ್ಲಸ್ಟರ್‌ಗೆ ವಿಶೇಷ ಪ್ರೋತ್ಸಾಹಕ ವ್ಯಾಕೇಜ್ ಘೋಷಣೆ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಶೇ.4ರಷ್ಟು ಬಡ್ಡಿಯಲ್ಲಿ ನೀಡುವ ಸಹಾಯಧನವನ್ನು ಮಳಿಗೆ/ ಡೀಲರ್ ಶಿಪ್ / ಫ್ರಾಂಚೈಸಿ ಮತ್ತು ಹೊಟೇಲ್ ಉದ್ಯಮ ಪ್ರಾರಂಭಿಸಲು ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಟಾಟಾ ಟೆಕ್ನಾಲಜಿ ಲಿ, ಸಹಯೋಗದಲ್ಲಿ 4636 ಕೋಟಿ ರು. ಹೂಡಿಕೆ ಮಾಡುವ ಮೂಲಕ 150 ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣಕ್ಕೆ ತೀರ್ಮಾನಿಸಲಾಗಿದೆ. ರಾಜ್ಯದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಹೊಸದಾಗಿ 23 ಅಲ್ಪಾವಧಿ ಹಾಗೂ 11 ದೀರ್ಘಾವತಿ ವೃತ್ತಿಪರ ಕೋರ್ಸ್ ಪ್ರಾರಂಭ ಮಾಡಲು ಬಜೆಟ್‌ನಲ್ಲಿ ತೀರ್ಮಾನಿಸಲಾಗಿದೆ. ಒಟ್ಟಾರೆಯಾಗಿ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಅನುದಾನವನ್ನು ಕೊಟ್ಟ ಬಜೆಟ್ ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post