ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್‌ನ ಇಂತಹ ಪರಿಸ್ಥಿತಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಕರೆ ನೀಡಿದರು.
ಸಂಸ್ಕೃತಿ ಫೌಂಡೇಷನ್ ವತಿಯಿಂದ ನಗರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಸೋಂಕು ಹರಡುತ್ತಿರುವ ಇಂತಹ ಸಂದರ್ಭದಲ್ಲಿ ಮುಖ್ಯವಾಹಿನಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ತಮ್ಮ ಹಾಗೂ ಕುಟುಂಬದ ಆರೋಗ್ಯದ ಕುರಿತು ಸಹ ಕಾಳಜಿ ವಹಿಸಬೇಕು ಎಂದರು.
ಇನ್ನು ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪ್ರಮುಖವಾಗಿ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಭದ್ರಾವತಿಯ ವಿಐಎಸ್‌ಎಲ್‌ನಲ್ಲಿ ಉತ್ಪಾದನೆ ಆರಂಭವಾದ ತಕ್ಷಣ ಜಿಲ್ಲೆಯಲ್ಲಿ ಕೊರತೆ ಕಾಣುವುದಿಲ್ಲ. ಸದ್ಯ ಅಗತ್ಯವಿರುವ ಆಕ್ಸಿಜನ್ ಅನ್ನು ಬೇರೆಡೆಯಿಂದ ತರಿಸಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ. ಕಾಂತೇಶ್, ಪ್ರಮುಖರಾದ ಎಸ್. ದತ್ತಾತ್ರಿ, ಸುನೀತಾ ಅಣ್ಣಪ್ಪ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news










Discussion about this post