ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿವಿ, ಸಹ್ಯಾದ್ರಿ ಕಲಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಜ.4ರಂದು ಬೆಳಿಗ್ಗೆ 10.30ಕ್ಕೆ ಸಹ್ಯಾದ್ರಿ ಕಲಾ ಪರಿಷತ್ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಭಾರತ ಸರ್ಕಾರದ ಎನ್.ವಿ.ಎಸ್.ಶಿಕ್ಷಣ ಸಚಿವಾಲಯದ ನಿವೃತ್ತ ಜಂಟಿ ಆಯುಕ್ತ ಎ.ಎನ್.ರಾಮಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಕುಂಸಿ ಉಮೇಶ್, ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಅವಿನಾಶ್ ಟಿ., ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ.ಎನ್.ರಾಜೇಶ್ವರಿ, ಬಿ.ಎಸ್.ರಾಧಕೃಷ್ಣ ಉಪಸ್ಥಿತರಿರುವರು, ಪ್ರಾಂಶುಪಾಲ ಡಾ. ಸೈಯ್ಯದ್ ಸನಾವುಲ್ಲಾ ಅಧ್ಯಕ್ಷತೆ ವಹಿಸುವರು.
Also read: ಪತಿ ಮೃತಪಟ್ಟ ಸುದ್ದಿ ತಿಳಿದು ಆತ್ಮಹತ್ಯೆಗೆ ಶರಣಾದ ಪತ್ನಿ
ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಆಗಮಿಸಬೇಕು ಎಂದು ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಕೆ.ಎನ್.ಮಂಜುನಾಥ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post