ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹ್ಯಾದ್ರಿ ವಿಜ್ಞಾನ ಪರಿಷತ್ ಮತ್ತು ಕ್ರೀಡಾ ವಿಭಾಗ ವಾರ್ಷಿಕ ಚಟುವಟಿಕೆಗಳ ಹಾಗೂ ಸಹ್ಯಾದ್ರಿ ಮಹಿಳಾ ವಿದ್ಯಾರ್ಥಿನಿಲಯದ ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭವು ಮಾರ್ಚ್ 3ರಂದು ಬೆಳಗ್ಗೆ 11ಕ್ಕೆ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಶ್ರೀ ಜಯಚಾಮರಾಜೇಂದ್ರ ಒಡೆಯರ್ ವೇದಿಕೆಯಲ್ಲಿ ನಡೆಯಲಿದೆ.
ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ.ಬಿ.ಪಿ.ವೀರಭದ್ರಪ್ಪನವರು ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ಸಾಗರದ ಡಿವೈಎಸ್ಪಿಯಾದ ರೋಹನ್ ಜಗದೀಶ್, ಜಾನಪದ ಕಲಾವಿದರದ ಜೋಗಿಲ ಸಿದ್ದರಾಜು, ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಮುನೀರ್ ಪಾಷ ರವರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಅಧ್ಯಕ್ಷತೆಯನ್ನು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಪ್ರೋ. ಎನ್ ರಾಜೇಶ್ವರಿರವರು ವಹಿಸಲಿದ್ದು, ಕಲಾ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಧನಂಜಯ್ ಕೆ.ಬಿ., ಮತ್ತು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ವೀಣಾ ಎಂ.ಕೆ. ಭಾವಹಿಸಲಿದ್ದು, ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯದರ್ಶಿ ಹಾ. ಮ. ನಾಗಾರ್ಜುನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















