ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ರಂಗಾಯಣದಲ್ಲಿ ಇತ್ತೀಚೆಗೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ ಅನಾವರಣಗೊಳಿಸಲಾದ ‘ಮ್ಯೂರಲ್ ಆರ್ಟ್(ಭಿತ್ತಿಚಿತ್ರ)ಗ್ಯಾಲರಿಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ವಿ.ಸುನಿಲ್‍ಕುಮಾರ್ ಇವರು ಜ.1 ರಂದು ಮಧ್ಯಾಹ್ನ 1.30 ಕ್ಕೆ ಉಧ್ಘಾಟಿಸುವರು.
ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ ಸುಮಾರು ರೂ.20 ಲಕ್ಷ ವೆಚ್ಚದಲ್ಲಿ, ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಕಲಾವಿದರಿಂದ ನಿರ್ಮಾಣಗೊಂಡಿರುವ ಈ ಭಿತ್ತಿಚಿತ್ರಗಳನ್ನು ಈಗಾಗಲೇ ನಗರದ ಸುವರ್ಣ ಸಾಂಸ್ಕøತಿಕ ಭವನದ ಗೋಡೆಗಳ ಮೇಲೆ ಅನಾವಣಗೊಳಿಸಲಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರಾದ ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಕರ್ನಾಟಕ ರಂಗಸಮಾಜದ ಸದಸ್ಯ ಆರ್.ಎಸ್.ಹಾಲಸ್ವಾಮಿ, ಅಭಿಯಂತರ ವಿಜಯಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ಅಧ್ಯಕ್ಷತೆ ವಹಿಸುವರು ಎಂದು ರಂಗಾಯಣದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post