ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಜಿ ಫೌಂಡೇಶನ್, ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗೆ ಕ್ರಿಕೆಟ್ ಅಕಾಡೆಮಿ ಹಾಗೂ ಪರಿಸರಾಸಕ್ತರು ಒಡಗೂಡಿ ಬಿದರೆ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಎದುರಿನ ಶ್ರೀ ಸಾಯಿಬಾಬಾ ಮಂದಿರ ಬಳಿ ನಿರ್ಮಿಸಿರುವ ನೂತನ ಕೆರೆಯ ಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಮಾ.12ರ ಭಾನುವಾರ ಬೆಳಗ್ಗೆ 8 ಗಂಟೆಗೆ ನಡೆಯಲಿದೆ.
ಜಲ ಸಂರಕ್ಷಣೆಯ ಈ ವಿಶೇಷ ಕಾರ್ಯಕ್ರಮದಲ್ಲಿ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಡಾ. ಶ್ರೀಬಸವ ಮರುಳಸಿದ್ಧ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ್ರು, ಡಿ. ಎಸ್. ಅರುಣ್, ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಾಗರಾಜ್, ಸೂಡಾ ಮಾಜಿ ಅಧ್ಯಕ್ಷ ಎಸ್. ಎಸ್. ಜ್ಯೋತಿಪ್ರಕಾಶ್ ಭಾಗವಹಿಸುವರು. ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಪರಿಸರ ಪ್ರೇಮಿಗಳು ಹಾಜರಿರುವರು.
Also read: ಮಾಜಿ ಸಂಸದ, ಕಾಂಗ್ರೆಸ್ ಉಪಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















