No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Sunday, March 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಹೆಚ್ಚಳದ ತರಬೇತಿ ಹೆಚ್ಚಿಸಿ | ನ್ಯಾ. ಮಂಜುನಾಥ್ ನಾಯಕ್ ಕರೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ | ಕಟೀಲ್ ಅಶೋಕ ಪೈ ಕಾಲೇಜು ಸಹಯೋಗ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 11, 2025
in ಶಿವಮೊಗ್ಗ
0
ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಹೆಚ್ಚಳದ ತರಬೇತಿ ಹೆಚ್ಚಿಸಿ | ನ್ಯಾ. ಮಂಜುನಾಥ್ ನಾಯಕ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾರತದಲ್ಲಿ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಕೇವಲ ಒಂದು ವರ್ಷದಲ್ಲಿ 13,900ಕ್ಕಿಂತಲೂ ಹೆಚ್ಚು ಯುವಜನರು, ವಿದ್ಯಾರ್ಥಿಗಳು ಆತ್ಮಹತ್ಯೆಗೆ ಒಳಗಾಗಿರುವುದು ಆತಂಕಕಾರಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಆತಂಕ ವ್ಯಕ್ತಪಡಿಸಿದರು.

ನಗರದ ಪೋಲಿಸ್ ಸಭಾಂಗಣದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಕಾರ್ಯಕ್ರಮಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಭಾರತದಲ್ಲಿ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಕೇವಲ ಒಂದು ವರ್ಷದಲ್ಲಿ 13,900ಕ್ಕಿಂತಲೂ ಹೆಚ್ಚು ಯುವಜನರು, ವಿದ್ಯಾರ್ಥಿಗಳು ಆತ್ಮಹತ್ಯೆಗೆ ಒಳಗಾಗಿರುವುದು ಆತಂಕಕಾರಿ. ವಿದ್ಯಾರ್ಥಿಗಳಿಗೆ ತಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸುವ ತರಬೇತಿ ಹಾಗೂ ಬೆಂಬಲದ ಅಗತ್ಯವಿದೆ ಎಂದವರು ತಿಳಿಸಿದರು.

ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಎಲ್ಲಾ ತುರ್ತು ಸನ್ನಿವೇಶಗಳಲ್ಲಿ ಉಂಟಾಗಬಹುದಾದ ಮಾನಸಿಕ ಸಮಸ್ಯೆಗಳನ್ನು ಗುರುತಿಸಬೇಕು. ಮಾತ್ರವಲ್ಲದೆ ತಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ತಮ್ಮ ಹಾಗೂ ಇತರರ ಮಾನಸಿಕ ಆರೋಗ್ಯ ನಿರ್ವಹಣೆಯ ಸಂದರ್ಭದಲ್ಲಿ ಕೇವಲ ಪೊಲೀಸ್ ಎಂದಷ್ಟೇ ಅಲ್ಲದೆ ಮಾನವರಾಗಿ ಮನುಷ್ಯರಂತೆ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಪೊಲೀಸ್ ಸಿಬ್ಬಂದಿಗಳಿಗೆ ಮಾನಸಿಕ ಆರೋಗ್ಯ ಕುರಿತ ವಿಚಾರ ಸಂಕಿರಣ ಉಪಯುಕ್ತವಾಗಬಲ್ಲದು. ಜಿಲ್ಲಾ ಕಾನುನು ಸೇವಾ ಪ್ರಾಧಿಕಾರವು ಮಾನಸ ಸಂಸ್ಥೆಯ ಸಹಯೋಗದೊಂದಿಗೆ ಮಾನಸಿಕ ಆರೋಗ್ಯ ಕ್ಲಿನಿಕ್ ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ಕಟೀಲ್ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ ಮಾನಸಿಕ ಆರೋಗ್ಯ ಜನ ಜಾಗೃತಿ ಜಾಥಾಗೆ ನ್ಯಾ. ಮಂಜುನಾಥ ನಾಯಕ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್. ಸಂತೋಷ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಚಾಲನೆ ನೀಡಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ ಕುಮಾರ್ ಅವರು ಮಾತನಾಡಿ, ಪೊಲೀಸ್ ಸಿಬ್ಬಂದಿಗಳು ತಮ್ಮ ಹಾಗೂ ತಮ್ಮ ಮಾನಸಿಕ ಆರೋಗ್ಯ ಸಂರಕ್ಷಿಸಿಕೊಳ್ಳಬೇಕಾದ ಅಗತ್ಯಗಳನ್ನು ಉದಾಹರಣೆಗಳೊಂದಿಗೆ ತಿಳಿಸಿದರು.

ಮಾನಸ ನರ್ಸಿಂಗ್ ಹೋಂ ಮನೋವೈದಯರಾದ ಡಾ. ನವೀನ್ ಮಾತನಾಡಿ, ವಿಪತ್ತು ಸನ್ನಿವೇಶಗಳ ಮಾನಸಿಕ ಸ್ಥಿತಿಗತಿಗಳನ್ನು ವಿವರಿಸಿ ಸಾರ್ವಜನಿಕ ಸೇವೆಯಲ್ಲಿ ಇರುವವರ ಜವಾಬ್ದಾರಿ ಹಾಗೂ ಕೌಶಲ್ಯಗಳ ಕುರಿತು ಉಲ್ಲೇಖಿಸಿದರು.

ಮಾನಸಿಕ ಆರೋಗ್ಯ ಸೇವೆ ಕುಟುಂಬ ಹಾಗೂ ನೆರೆಹೊರೆಯ ಜನರ ಬೆಂಬಲ ಹಾಗೂ ಸಾಂತ್ವನದಿಂದ ಪ್ರಾರಂಭವಾಗುತ್ತದೆ. ಎರಡನೇ ಹಂತ ವಿವಿಧ ಇಲಾಖೆ ಹಾಗೂ ಸಂಸ್ಥೆಗಳದ್ದು. ಮೂರನೆಯ ಹಂತ ಮಾನಸಿಕ ಆರೋಗ್ಯ ತಜ್ಞರದ್ದು ಎಂದು ತಿಳಿಸಿದರು.

ಸಂಧ್ಯಾ ಕಾವೇರಿಯವರು ಮಾತನಾಡಿ, ಮಾನಸಿಕ ಆರೋಗ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ 7 ದಿನಗಳ ಕಾಲ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಮಾನಸಿಕ ಆರೋಗ್ಯ ಸಂರಕ್ಷಣೆಯ ಕುರಿತು ಸಾರ್ವಜನಿಕ ಗಮನ ಸೆಳೆಯಲು ದಿನಾಂಕ 11 ರಂದು ಸಿಟಿ ಸೆಂಟರ್ ಮಾಲ್ ನಲ್ಲಿ ಸಂಜೆ 5 ಗಂಟೆಗೆ ನೃತ್ಯ ರೂಪಕ ನಡೆಯಲಿದೆ ಎಂದರು.
ಎರಡು ದಿನಗಳ ಕಾಲ ವೆಬಿನಾರ್ ನಡೆಯಲಿದ್ದು, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಆಪ್ತ ಎಂಬ ಸಮಾಲೋಚನಾ ಕೇಂದ್ರ ಉದ್ಘಾಟನೆ ಆಗಲಿದೆ. ರಸಪ್ರಶ್ನೆ ಹಾಗೂ ವಿಡಿಯೋ ಸ್ಪರ್ಧೆ ನಡೆಯಲಿದೆ. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತದೆ. ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಮಾನಸ ನರ್ಸಿಂಗ್ ಹೋಂನಲ್ಲಿ ವಿಶೇಷ ಮನೋಶಿಕ್ಷಣ ಆಪ್ತ ಸಮಾಲೋಚನೆಯನ್ನು 1 ವಾರಗಳ ಕಾಲ ಉಚಿತವಾಗಿ ನೀಡಲಾಗುತ್ತದೆ ಎಂದರು.

ಸಪ್ತಾಹ ಕಾರ್ಯಕ್ರಮಗಳ ಸಮಾರೋಪವು ದಿನಾಂಕ 17ರಂದು ನಗರದ ಗೋಪಿ ವೃತ್ತದಲ್ಲಿ ಮನೋ ಸಾಮಾಜಿಕ ಸಂರಕ್ಷಣೆಯ ಪ್ರತಿಜ್ಞಾ ವಿಧಿಯ ಮೂಲಕ ನಡೆಯಲಿದೆ. ಸಾಯಂಕಾಲ 5.30 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಸವಿತಾ ನಾಗಭೂಷಣ್ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ನ್ಯಾಯಾಧೀಶರಾದ ಸಂತೋಷ್, ಡಾ. ರಜನಿ ಪೈ , ರಾಜೇಂದ್ರ ಚೆನ್ನಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಮನಶಾಸ್ತ್ರಜ್ಞರಾದ ಶ್ರೀದೇವಿ ಹಾಗೂ ಡಾ. ಶ್ವೇತಾ, ಎಂ ಫಿಲ್ ಕ್ಲಿನಿಕಲ್ Psychology ಪ್ರಶಿಕ್ಷಣಾರ್ಥಿಗಲಾದ ದೃಶ್ಯ ಮತ್ತು ಚೇತನ ಒತ್ತಡ ನಿರ್ವಹಣೆ ಕುರಿತು ಅಧಿವೇಶನಗಳನ್ನು ನಡೆಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಏ.ಜಿ. ಕಾರಿಯಪ್ಪ, ರಮೇಶಕುಮಾರ್, ಮಾನಸ ಸಂಸ್ಥೆ ಆಡಳಿತಾಧಿಕಾರಿ ಪ್ರೊ.ರಾಮಚಂದ್ರ ಬಾಳಿಗ, ಪ್ರಾಂಶುಪಾಲರಾದ ಸಂಧ್ಯಾ ಕಾವೇರಿ, ಡಾ.ಮಲ್ಲಿಕಾರ್ಜುನ್, ಡಾ. ಅರ್ಚನಾ ಭಟ್, ಡಾ. ಹರಿಹರನ್ ಉಪಸ್ಥಿತರಿದ್ದರು.

ಶ್ರೀದೇವಿ ಕಾರ್ಯಕ್ರಮ ನಿರೂಪಿಸಿ, ಡಾ. ಅರ್ಚನಾ ಸ್ವಾಗತಿಸಿದರು. ಡಾ.ಹರಿಹರನ್ ವಂದಿಸಿ, ಎಂಎಸ್’ಸಿ ಕ್ಲಿನಿಕಲ್ ಸೈಕಾಲಜಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸುಮಾರು 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಸ್ಮಾರಕ ಶೈಕ್ಷಣಿಕ ಸಂಸ್ಥೆಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಪೊಲೀಸ್ ಸಿಬ್ಬಂದಿಗಳಿಗಾಗಿ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದ ಮುಸ್ಲಿಂ ಯುವತಿ | ಮರ್ಯಾದಾ ಹತ್ಯೆ | ಇಬ್ಬರಿಗೆ ಗಲ್ಲು ಶಿಕ್ಷೆ

Next Post

ಗದಗ ರೈಲು ನಿಲ್ದಾಣದಲ್ಲಿ ಅಮೃತ ಸಂವಾದ ಕಾರ್ಯಕ್ರಮ ಯಶಸ್ವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗದಗ ರೈಲು ನಿಲ್ದಾಣದಲ್ಲಿ ಅಮೃತ ಸಂವಾದ ಕಾರ್ಯಕ್ರಮ ಯಶಸ್ವಿ

ಗದಗ ರೈಲು ನಿಲ್ದಾಣದಲ್ಲಿ ಅಮೃತ ಸಂವಾದ ಕಾರ್ಯಕ್ರಮ ಯಶಸ್ವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Swift Action by GRP & RPF Restores Lost Valuables Worth ₹19 Lakhs to Passenger

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

March 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

March 14, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಜಿಲ್ಲೆಯಲ್ಲಿ ಅಡುಗೆ ಅನಿಲದ ಗಂಭೀರ ಸಮಸ್ಯೆ ಇಲ್ಲ: ಸಚಿವ ಮಧು ಬಂಗಾರಪ್ಪ

March 14, 2026
Swift Action by GRP & RPF Restores Lost Valuables Worth ₹19 Lakhs to Passenger

Swift Action by GRP & RPF Restores Lost Valuables Worth ₹19 Lakhs to Passenger

March 14, 2026
ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

March 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL