ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾನಗರ ಪಾಲಿಕೆ ನೌಕರರು ನಾಳೆಯಿಂದಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯ ಸಮಿತಿ ಕರೆ ಮೇರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘವು ನಾಳೆಯಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದು, ಸ್ವಚ್ಛತಾ ಕಾರ್ಮಿಕರೂ ಸೇರಿದಂತೆ ಪಾಲಿಕೆಯ ಎಲ್ಲಾ ವಿಭಾಗಗಳ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಿಂದಾಗಿ ನಗರದ ಸ್ವಚ್ಚತೆ, ಕಂದಾಯ ವಿಭಾಗಗಳ ಕಾರ್ಯಗಳು ಸ್ಥಗಿತಗೊಳ್ಳಲಿವೆ.

ನಾಳೆ ಬೆಳಗ್ಗೆ ಇಲ್ಲಿನ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪಾಲಿಕೆಯ ಎಲ್ಲಾ ವಿಭಾಗಗಳ ನೌಕರರು ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷರಾದ ಎನ್. ಗೋವಿಂದ, ಪ್ರಧಾನಕಾರ್ಯದರ್ಶಿ ಮೋಹನ್ ಕುಮಾರ್ ಉಪಾಧ್ಯಕ್ಷರಾದ ಪಿ.ಕುಮಾರ, ನೇತೃತ್ವದಲ್ಲಿ ಮುಷ್ಕರ ಹಮ್ಮಿಕೊಳ್ಳಲಿದ್ದಾರೆ.

ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಪಾಲಿಕೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ನೀಡಬೇಕು ಎಂದು ಎನ್.ಗೋವಿಂದ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post