ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಪಂಚಾಯತ್ ಶಿವಮೊಗ್ಗ, ತಾಲ್ಲೂಕು ಪಂಚಾಯತ್ ಹೊಸನಗರ, ಗ್ರಾಮ ಪಂಚಾಯತ್ ಅರಸಾಳು ಇವರ ಸಂಯುಕ್ತಾಶ್ರಯದಲ್ಲಿ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದ ಆವರಣದಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಅರಸಾಳು ರೈಲ್ವೆ ನಿಲ್ದಾಣ ಆವರಣದಲ್ಲಿ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ ಹಾಗೂ ಮ್ಯೂಸಿಂ ವೀಕ್ಷಣೆ ಕಾರ್ಯ ಕೈಗೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಸಾಳು ಗ್ರಾ.ಪಂ ಅಧ್ಯಕ್ಷ ಹೂವಪ್ಪ ಯಾನೆ ಉಮಾಕರ ಇವರು ವಹಿಸಿದ್ದರು. ಉಪಾಧ್ಯಕ್ಷೆ ಲಕ್ಷ್ಮೀ ಸೋಮಶೇಖರ, ಗ್ರಾಮ ಪಂಚಾಯಿತಿಯ ಸದಸ್ಯರುಗಳಾದ ಅರುಣ ಕುಮಾರ, ಸುಶೀಲ, ಶ್ರೀಮಂತ ಡಿ ಕೆ, ಪುಷ್ಪ ಹೆಚ್, ಎಂ ಜಯಮ್ಮ, ಯೋಗೇಂದ್ರನಾಯ್ಕ, ಉಮೇಶ, ಪೂರ್ಣಿಮಾ, ದೇವರಾಜ್ ಜಿ ಟಿ, ಶಾಂತ ಕುಮಾರಿ ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post