ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ 9 ವರ್ಷದಲ್ಲಿ ರಾಜ್ಯದಲ್ಲಿ 54,858 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಆಗಿದೆ. ಪ್ರತಿ ದಿನ 371 ಕಿ.ಮೀ ರಸ್ತೆ ಅಭಿವೃದ್ದಿ ಆಗುತ್ತಿದ್ದು ಭಾರತ ದೇಶ ರಸ್ತೆ ಅಭಿವೃದ್ದಿಯಲ್ಲಿ ಮೊದಲನೇ ಸ್ಥಾನದಲ್ಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಸಂತಸ ವ್ಯಕ್ತಪಡಿಸಿದರು.
ಈ ಕುರಿತಂತೆ ಮಾತನಾಡಿದ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ Union Minister Nitin Gadkari ಅವರು ರೂ.6.68 ಕೋಟಿ ದಕ್ಷಿಣ ವಲಯಕ್ಕೆ ನೀಡಿದ್ದಾರೆ. ಸಿಗಂದೂರು ಕೇಬಲ್ ಸೇತುವೆ, ರಾಷ್ಟ್ರೀಯ ಹೆದ್ದಾರಿ ಉನ್ನತೀಕರಣ, ರಿಂಗ್ ರಸ್ತೆ, ರಾಣೆಬೆನ್ನೂರು-ಬೈಂದೂರು ರಸ್ತೆ, ಮೇಲ್ಸೇತುವೆಗಳಿಗೆ ಕೇಂದ್ರ ಸಚಿವರು ಅನುದಾನ ಒದಗಿಸಿದ್ದು, ತೆರ್ ಸಾರಿಗೆಯನ್ನು ಸುರಕ್ಷಿತ ಮತ್ತು ಕಡಿಮೆ ಸಮಯದಲ್ಲಿ ತಲುಪುವಂತೆ ಮಾಡಿದ್ದಾರೆ ಎಂದರು.

Also read: ಸುಸಜ್ಜಿತ ಮೈದಾನಗಳಿದ್ದರೂ ಕ್ರೀಡಾಪಟುಗಳ ಸಂಖ್ಯೆ ಕಡಿಮೆ: ಇಮ್ತಿಯಾಜ್ ಅಹಮದ್ ಬೇಸರ
280 ಬಿಎಸ್’ಎನ್’ಎಲ್ ಟವರ್’ಗೆ ಮಂಜೂರಾತಿ ದೊರೆತಿದೆ. 2008 ರಿಂದ 22 ರವರೆಗೆ ಜಿಲ್ಲೆಯಲ್ಲಿ ರಸ್ತೆ, ಮೆಡಿಕಲ್ ಕಾಲೇಜು, ಕೃಷಿ, ತೋಟಗಾರಿಕೆ, ಪಶು ವೈದ್ಯಕೀಯ , ಕೇಂದ್ರೀಯ ವಿದ್ಯಾಲಯ, ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಸೇರಿದಂತೆ ಸಮಗ್ರ ಅಭಿವೃದ್ದಿ ಕಂಡಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post