ಭಾರತ, ಇಂಡಿಯಾ ಎಂದು ಭಾವನಾತ್ಮಕ ವಿಷಯ ಹಿಡಿದುಕೊಂಡು ಬಿಜೆಪಿಯವರು ಆಟ ಆಡಲು ಹೋದರೆ ಜನರೇ ತಕ್ಕ ಶಿಕ್ಷೆ ನೀಡುತ್ತಾರೆ ಎಂದು ಪ್ರಾಥಮಿಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Minister Madhu Bangarappa ಹೇಳಿದರು.
ಈಗ ನಾವೆಲ್ಲರೂ ಸುಖವಾಗಿದ್ದೇವೆ. ತೊಂದರೆ ಆಗುವುದಾದರೂ ಏನು ಅರ್ಥವಾಗುತ್ತಿಲ್ಲ. ಅಧಿಕಾರ ಇದೆಯೆಂದು ಹೀಗೆ ಮಾಡಿದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.
Also read: ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ: ಬಿ. ಕೃಷ್ಣಪ್ಪ ಕಿವಿಮಾತು
ಇಂಡಿಯಾ ಎಂಬ ಹೆಸರಿಗೆ ಯಾವುದೇ ಹಿನ್ನೆಲೆ ಇಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ Araga Gnanendra ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಧು ಬಂಗಾರಪ್ಪ, ಮೊದಲು ಅವರ ಹಿನ್ನೆಲೆ ಏನು ಎಂದು ತಿಳಿದುಕೊಳ್ಳಲಿ. ರಾಷ್ಟ್ರವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಇಂಡಿಯಾ ಹೆಸರಿನಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ. ಎವರೆಸ್ಟ್ ಶಿಖರದ ಮೇಲು ಇಂಡಿಯಾ ಎಂಬ ಹೆಸರು ಅಚ್ಚೊತ್ತಿದೆ. ಬಿಜೆಪಿಯವರು ಸುಮ್ಮನೆ ಭಾವನಾತ್ಮಕ ಆಟ ಆಡುವುದನ್ನು ನಿಲ್ಲಿಸಿ ಒಳ್ಳೆಯ ಕೆಲಸ ಏನಾದರೂ ಮಾಡಿದ್ದರೆ ಅದನ್ನು ಹೇಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸನಾತನ ಧರ್ಮ ಕುರಿತು ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಉದಯ ನಿಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವರು, ಅವರು ಯಾವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೋ ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಟೀಕೆ ಮಾಡಲು ಹೋಗುವುದಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















