ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ ಭಾನುವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ವಾಡೋ ಕರಾಟೆ ಫೆಡರೇಶನ್ ಆಯೋಜಿಸಿದ ಇಂಡೋ ನೇಪಾಳ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಕ್ರೀಡಾಪಟುಗಳು ರಾಜ್ಯವನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದಿದ್ದಾರೆ.
ಜೈನ ಪಬ್ಲಿಕ್ ಶಾಲೆಯ ಮದಿಹಾ ಇಬ್ರಾಹಿಂ ಕಟ ವಿಭಾಗದಲ್ಲಿ ಪ್ರಥಮ ಸ್ಥಾನ ಡಿವಿಎಸ್ ಕಾಲೇಜಿನ ಪ್ರತಿಕ್ಷ ಕುಮಟಿ ವಿಭಾಗದಲ್ಲಿ ಪ್ರಥಮ ಸ್ಥಾನ, ಬೊಮ್ಮನಕಟ್ಟೆ ಸರ್ಕಾರಿ ಶಾಲೆಯ ಜೀವನ ಕಟ ವಿಭಾಗದಲ್ಲಿ ತೃತೀಯ ಸ್ಥಾನ, ನ್ಯಾಮತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಮಲ್ಲಿಕಾರ್ಜುನ ಕುಮಟಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ವಿಜೇತ ಕ್ರೀಡಾಪಟುಗಳಿಗೆ ಹಾಗೂ ತಂಡದ ಕೋಚ್ ವೆಂಕಟೇಶ್ ಗೆ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದನೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post