ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್‍ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು.
ನಗರದ ಸ್ಮಾರ್ಟ್‍ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಾದ ಕುವೆಂಪು ರಸ್ತೆ, ಜೈಲ್ ಸರ್ಕಲ್, ಸವಳಂಗ ರಸ್ತೆ, ಗೋಪಿ ಸರ್ಕಲ್, ಶಿವಪ್ಪ ನಾಯಕ ಅರಮನೆ, ರಿವರ್ ಫ್ರಂಟ್ ಪ್ರಾಜೆಕ್ಟ್ ಕಾಮಗಾರಿ ಪರಿಶೀಲನೆ ನಡೆಸಿದರು. ಹಾಗೂ ಬಿ.ಹೆಚ್ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಭೇಟಿ ನೀಡಿ ಸ್ಮಾರ್ಟ್ ಕ್ಲಾಸ್, ಸೇರಿದಂತೆ ಶಾಲೆಯ ಚಟುವಟಿಕೆಗಳಸನ್ನು ವೀಕ್ಷಿಸಿದರು. ನಂತರ ಸ್ಮಾರ್ಟ್‍ಸಿಟಿ ಕಚೇರಿಯಲ್ಲಿ ಸ್ಮಾರ್ಟ್‍ಸಿಟಿ ಯೋಜನೆಗಳ ಕುರಿತು ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು.
Also read: ಎನ್‌ಆರ್‌ಎಲ್‌ಎಂ ನೂತನ ಕಚೇರಿ ಕಟ್ಟಡ ಲೋಕಾರ್ಪಣೆ










Discussion about this post