ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯ ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯ ಅನುಷ್ಟಾನದಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ, ತಪ್ಪಿತಸ್ಥರನ್ನು ತಕ್ಷಣ ಅಮಾನತುಗೊಳಿಸಿ, ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಜನೆ ಅನುಷ್ಟಾನದಲ್ಲಿನ ಲೋಪದೋಷಗಳ ಬಗ್ಗೆ ಹಿರಿಯ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ನಿರಂತರ ಜ್ಯೋತಿ ಯೋಜನೆ ಫೀಡರ್‌ಗಳ ಅಳವಡಿಕೆ ಸಮರ್ಪಕವಾಗಿ ಆಗಿಲ್ಲ. 224ಕೋಟಿ ರೂ. ಮೊತ್ತದ ಈ ಯೋಜನೆ ಅನುಷ್ಟಾನದಲ್ಲಿ ಅಧಿಕಾರಿಗಳ ನಿರ್ಲಕ್ಷö್ಯ ಕಾಣುತ್ತಿದೆ. ವಿದ್ಯುತ್ ಕಂಬಗಳನ್ನು ನಿಗದಿತ ಆಳದಲ್ಲಿ ಅಳವಡಿಸದಿರುವುದು, ಸಮರ್ಪಕ ಅರ್ಥಿಂಗ್ ಮಾಡದಿರುವುದು, ಕಾರ್ಮಿಕ ಕಾಯ್ದೆಗಳನ್ನು ಸರಿಯಾಗಿ ಪಾಲನೆ ಮಾಡದಿರುವುದು ಸೇರಿದಂತೆ ವಿವಿಧ ಹಂತಗಳಲ್ಲಿ ಲೋಪದೊಷಗಳು ಕಂಡುಬAದಿದೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಸೂಚಿಸಲಾಗಿದೆ. ಯೋಜನೆ ಅನುಷ್ಟಾನದ ಕುರಿತು ಸಮಗ್ರ ತನಿಖೆಯನ್ನು ಎಸಿಬಿ ವತಿಯಿಂದ ಅಥವಾ ಇಲಾಖಾ ತನಿಖೆ ನಡೆಸುವ ಕುರಿತು ಪ್ರಧಾನ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಶೇ.60ರಷ್ಟು ಕೇಂದ್ರ ಹಾಗೂ ಶೇ.40ರಷ್ಟನ್ನು ಮೆಸ್ಕಾಂ ಭರಿಸುತ್ತದೆ. ಗ್ರಾಮೀಣ ಪ್ರದೇಶದ 11ಕೆ.ವಿ. ಮಾರ್ಗಗಳಲ್ಲಿ ಕೃಷಿ ಮತ್ತು ಕೃಷಿಯೇತರ ಸ್ಥಾವರಗಳನ್ನು ಬೇರ್ಪಡಿಸುವುದು, ಗ್ರಾಮೀಣ ಮನೆಗಳ ವಿದ್ಯುದ್ದೀಕರಣ, ಮಾಪಕೀಕರಣವನ್ನು ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿದೆ. ಯೋಜನೆಯಡಿ ಹಾಲಿ ಇರುವ 145 ಗ್ರಾಮೀಣ ಫೀಡರ್‌ಗಳ ಕೃಷಿಯೇತರ ಹೊರೆಯನ್ನು ಪ್ರತ್ಯೇಕಿಸಲು 68 ಹೊಸ ಫೀಡರ್‌ಗಳನ್ನು ನಿರ್ಮಿಸಲಾಗಿದೆ. ಈಗಾಗಲೇ 66 ಫೀಡರ್‌ಗಳನ್ನು ಚಾಲನೆಗೊಳಿಸಲಾಗಿದ್ದು, 39 ಫೀಡರ್‌ಗಳ ಕಾಮಗಾರಿ ಬಿಲ್ ಪಾವತಿ ಮಾಡಲಾಗಿದೆ. ಇನ್ನುಳಿದ ಬಿಲ್ಲುಗಳ ಪಾವತಿಯನ್ನು ತಡೆ ಹಿಡಿಯಲಾಗಿದೆ ಎಂದು ಇಲಾಖಾ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಅಶೋಕ ನಾಯ್ಕ್ , ವಿಧಾನ ಪರಿಷತ್ ಸದಸ್ಯರಾದ ಅಯನೂರು ಮಂಜುನಾಥ, ರುದ್ರೇಗೌಡ, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೆಸ್ಕಾಂ ಎಂಡಿ ಪ್ರಶಾಂತ್ ಕುಮಾರ್ ಮಿಶ್ರಾ ಸೇರಿದಂತೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post