ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಶಾಸಕರಿಗೆ ನೀಡುವಷ್ಟೇ ಗೌರವ ಮತ್ತು ಸ್ಥಾನಮಾನವನ್ನು ವಿಧಾನಪರಿಷತ್ ಸದಸ್ಯರಿಗೂ ನೀಡಬೇಕೆಂದು ಸರ್ಕಾರದ ಪ್ರೋಟೋಕಾಲ್ ನಿಯಮವಿದ್ದರೂ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕೆಂಡಾಮಂಡಲವಾಗಿದ್ದರು.
ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಈ ಬಗ್ಗೆ ಮತ್ತು ಅಧಿಕಾರಿಗಳ ಧೋರಣೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಇನ್ನಿಬ್ಬರು ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ ಹಾಗೂ ಪ್ರಸನ್ನ ಕುಮಾರ್ ಅವರೊಂದಿಗೆ ಸಭೆಯಿಂದ ಹೊರನಡೆದು, ಬಹಿಷ್ಕಾರ ಮಾಡುವ ಮಟ್ಟಕ್ಕೆ ಹೋಗಿದ್ದರು.
ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ತಿಳಿಗೊಳಿಸಿ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಆಶ್ವಾಸನೆ ನೀಡಿದ ಕಾರಣ ಸಭೆಯಲ್ಲಿ ಭಾಗವಹಿಸಲು ಒಪ್ಪಿಕೊಂಡರು. ಹಾಗೂ ಸಭೆ ನಡೆಸಲು ನಡೆಯಲು ಅವಕಾಶ ಮಾಡಿಕೊಟ್ಟರು. ನಂತರ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post