ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಜೈನ್ ಪಬ್ಲಿಕ್ ಶಾಲೆಯಲ್ಲಿ #JainPublicSchool ಆಯೋಜಿಸಲಾಗಿದ್ದ ಸಮ್ಮಿಲನ 2.0 ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ಪೋಷಕರು ಮಕ್ಕಳಂತೆ ಆಟವಾಡಿ ನಲಿದರು.
ಜೈನ್ ಪಬ್ಲಿಕ್ ಶಾಲೆ ಸತತ 11ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ.
ಅದೇ ರೀತಿ, ಈ ವರ್ಷವೂ ಸಹ ಪೋಷಕರಿಗಾಗಿ ಸಮ್ಮಿಲನ 2.0 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಈ ವೇಳೆ ಮಾತನಾಡಿದ ಅವರು, ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಬೇಕು. ನಿಯಮಿತವಾಗಿ ಪ್ರತಿಯೊಬ್ಬರೂ ಕ್ರೀಡೆಯಂತಹ #Sports ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಮಾನಸಿಕ ಹಾಗೂ ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ವೀಡಿಯೋ ಮೂಲಕ ಮಹತ್ವವನ್ನು ತಿಳಿಸುವುದರ ಮೂಲಕ ಪೋಷಕರನ್ನು ಹುರಿದುಂಬಿಸಿದರು.
ಕಾರ್ಯಕ್ರಮದ ಅಂಗವಾಗಿ ಪೋಷಕರಿಗಾಗಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾದ ಕ್ರೀಡೆಗಳು, ದಂಪತಿಗಳಿಗೆ ವಿಶೇಷವಾದಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಪೋಷಕರು ಮಕ್ಕಳಂತೆ ಅತ್ಯಂತ ಸಂಭ್ರಮದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ತಮ್ಮ ಬಾಲ್ಯದ ದಿನಗಳನ್ನು ನೆನಪು ಮಾಡಿಕೊಳ್ಳುವ ಮೂಲಕ ಸಂಭ್ರಮಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಶುಭಕೋರಿ ಬಹುಮಾನ ವಿತರಣೆ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post