ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಚೆಸ್ ಪಂದ್ಯಾವಳಿಯಲ್ಲಿ #Chess Tournament ಪುರುಷರ ವಿಭಾಗದಿಂದ ಶಂಕರಘಟ್ಟದ ಜ್ಞಾನಸಹ್ಯಾದ್ರಿ ತಂಡ, ಮಹಿಳಾ ವಿಭಾಗದಲ್ಲಿ ಶೃಂಗೇರಿಯ ಜೆಸಿಬಿಎಂ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ.
ಪುರುಷರ ವಿಭಾಗದಲ್ಲಿ ಎರಡನೇ ಸ್ಥಾನವನ್ನು ಎಟಿಎನ್‌ಸಿಸಿ ಕಾಲೇಜಿನ ತಂಡ ಹಾಗೂ ಮೂರನೇ ಸ್ಥಾನವನ್ನು ಶಿವಮೊಗ್ಗದ ಪಿಇಎಸ್ ಕಾಲೇಜು ಪಡೆದುಕೊಂಡಿದ್ದಾರೆ.
ಮಹಿಳಾ ವಿಭಾಗದಲ್ಲಿ ಸಾಗರದ ಇಂದಿರಾಗಾಂಧಿ ಕಾಲೇಜಿನ ವಿದ್ಯಾರ್ಥಿನಿಯರು ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಮೂರನೇ ಸ್ಥಾನವನ್ನು ಶಿವಮೊಗ್ಗದ ಎಸ್‌ಆರ್‌ಎನ್‌ಎಂಸಿ ಮೂರನೇ ಸ್ಥಾನ ಪಡೆದಿದ್ದಾರೆ.
Also read: ‘ವಿಕಾಸ’ ದಿಂದ ಸಾಧಕೋತ್ತಮರಿಗೆ ಸುವರ್ಣ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ವಿಷ್ಣುಮೂರ್ತಿ, ಚೆಸ್ ಕ್ರೀಡೆ ಮತ್ತೆ ವಿಜೃಂಭಿಸುತ್ತಿದೆ. ಭಾರತದ ಕ್ರೀಡೆಯಾದ ಇದು ಇಂದು ಜಗತ್ತಿನಲ್ಲಿಯೇ ಮನ್ನಣೆ ಪಡೆದಿದೆ. ವಿಶ್ವವಿದ್ಯಾಲಯಗಳು ಕೂಡ ಈ ಕ್ರೀಡೆಗೆ ಮನ್ನಣೆ ನೀಡುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಕುವೆಂಪು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎನ್.ಡಿ. ವಿರೂಪಾಕ್ಷ, ಎನ್‌ಇಎಸ್ ನಿರ್ದೇಶಕ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಪ್ರಾಂಶುಪಾಲೆ ಪ್ರೊ. ಮಮತಾ ಪಿ.ಆರ್., ಸಂಚಾಲಕ ಪ್ರೊ. ಎನ್. ಮಂಜುನಾಥ್ ಇದ್ದರು.
ಶಿಬಿರದ ಸಂಚಾಲಕ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಕೆಎಂ. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post