ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚೆಗೆ ನಡೆದ ಅಂತರ ಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಗಳಿಸುವ ಮೂಲಕ ಶಾಲೆಗೆ ಕೀತಿ ತಂದಿದ್ದಾರೆ.
ಸಹ್ಯಾದ್ರಿ ಸಹೋದಯದ ವತಿಯಿಂದ ಇತ್ತೀಚೆಗೆ ಭದ್ರಾವತಿಯಲ್ಲಿ ಅಂತರ ಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಸ್ಪರ್ಧಿಸಿದ್ದ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಜಯದಿಂದ ಶಾಲೆಯ ಕೀರ್ತಿ ಮತ್ತಷ್ಟು ಹೆಚ್ಚಾಗಿದೆ. ಮುಂದಿನ ಸ್ಪರ್ಧೆಗಳಲ್ಲೂ ಇದೇ ಉತ್ಸಾಹದಿಂದ ಭಾಗವಹಿಸಿ, ಕೀರ್ತಿಯನ್ನು ತರುವ ವಿಶ್ವಾಸವನ್ನು ಪ್ರಾಚಾರ್ಯರು ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post