ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ನೀರು, ರಸ್ತೆ, ಚರಂಡಿ, ಮಳೆ ನೀರು, ಕಸ ಇತ್ಯಾದಿ ನಾಗರೀಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಜೂನ್ 17ರಂದು ಬೆಳಿಗ್ಗೆ 11ಗಂಟೆಗೆ ಪತ್ರಿಕಾ ಭವನದಲ್ಲಿ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಅವರೊಂದಿಗೆ ಮುಖಾಮುಖಿ ಕಾರ್ಯಕ್ರಮ ಆಯೋಜಿಸಲಾಗಿದೆ.
Also read: ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್
ನಗರದ ನಾಗರಿಕರು, ಸಂಘ-ಸಂಸ್ಥೆಗಳು ಈ ಮುಖಾಮುಖಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಗರದ ಅಭಿವೃದ್ಧಿಗೆ, ಸಮಸ್ಯೆಗಳ ಪರಿಹಾರಕ್ಕೆ ಪಾಲಿಕೆ ಯೊಂದಿಗೆ ಕೈಜೋಡಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಮನವಿ ಮಾಡಿದೆ. ಅಲ್ಲದೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಯಸುವ ಸಂಘ-ಸಂಸ್ಥೆಗಳು ಮತ್ತು ನಾಗರೀಕರು ಮುಂಚಿತವಾಗಿ ನಾಗರೀಕ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಪ್ರಶ್ನೆಗಳು-ಸಲಹೆಗಳನ್ನು 9448138183, 8073502892, 9538172845ಗೆ ತಿಳಿಸಬೇಕು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















