ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕರ್ನಾಟಕ ರಾಜ್ಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಾರ್ವಜನಿಕ ಓದುಗರ ಅನುಕೂಲಕ್ಕಾಗಿ ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಆರಂಭಿಸಲಾಗಿದೆ.
ಈ ಡಿಜಿಟಲ್ ಗ್ರಂಥಾಲಯವನ್ನು ಬಳಸಿಕೊಳ್ಳಲು ಅರಿವು ಮೂಡಿಸುವ ಸಲುವಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಅಭಿವೃದ್ಧಿಪಡಿಸಿರುವ e-sarvajanika Granthalaya ಮೊಬೈಲ್ ಆಪನ್ನು ಹಾಗೂ ಜಾಲತಾಣ www.karnatakadigitalpubliclibrary.org ಮೂಲಕ ಡೌನ್‌ಲೋಡ್ ಮಾಡಿಕೊಂಡು ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ಪಡೆದುಕೊಂಡು ಮೊಬೈಲ್, ಕಂಫ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್ ಮೂಲಕ ಪುಸ್ತಕಗಳನ್ನು ಉಚಿತವಾಗಿ ಓದಿ ಲಾಕ್‌ಡೌನ್ ಸಮಯದಲ್ಲಿ ಸದುಪಯೋಗ ಪಡಿಸಿಕೊಳ್ಳಲು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕೋರಲಾಗಿದೆ.
ಇ-ಸಾರ್ವಜನಿಕ ಗ್ರಂಥಾಲಯ ಆಪ್‌ನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇ-ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳು, ಸಿಇಟಿ, ಎನ್‌ಇಇಟಿ, ಯುಪಿಎಸ್‌ಸಿ, ಕೆಪಿಎಸ್‌ಸಿ ಅದಲ್ಲದೇ ರಾಜ್ಯ ಸರ್ಕಾರ, ಸಿಬಿಎಸ್‌ಸಿ, ಐಸಿಎಸ್‌ಸಿ, ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳು ಮತ್ತು ವಿವಿಧ ಭಾಷೆಗಳ ಪ್ರಾದೇಶಿಕ, ರಾಷ್ಟ್ರೀಯ ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳು ಲಭ್ಯವಿರುತ್ತವೆ ಎಂದು ನಗರ ಕೇಂದ್ರ ಗ್ರಂಥಾಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post