ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಬಕಾರಿ ಇಲಾಖೆಯ ಅಧಿಕಾರಿಗಳ ವರ್ಗಾವಣೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಅಬಕಾರಿ ಸಚಿವರ ನಡುವೆ ಪೈಪೋಟಿ ನಡೆದಿದ್ದು, ನೂರಾರು ಕೋಟಿಯ ಅವ್ಯವಹಾರ ಬಯಲಿಗೆ ಬಂದಿದೆ ಎಂದು ಬಿಜೆಪಿಯ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ #B Y Raghavendra ಹೇಳಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಈಗಾಗಲೆ ಮಧ್ಯ ಮಾರಾಟಗಾರರ ಸಂಘವೇ ರಾಜ್ಯಪಾಲರಿಗೆ, ಸರ್ಕಾರ ದ ಮುಖ್ಯಕಾರ್ಯದರ್ಶಿಗಳಿಗೆ ಲಿಖಿತ ದೂರು ನೀಡಿದೆ. ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆಯ ವಿಚಾರದಲ್ಲಿ ಅಬಕಾರಿ ಸಚಿವ ಅರ್.ಬಿ. ತಿಮ್ಮಾಪುರ್ ಅವರ ಮಕ್ಕಳು ಹಸ್ತಕ್ಷೇಪ ಮಾಡುತ್ತಿದ್ದು, ಮುಖ್ಯಮಂತ್ರಿಗಳು ಈ ಪಟ್ಟಿಯನ್ನು ತಡೆ ಹಿಡಿದಿದ್ದಾರೆ. ಇದರಿಂದ ಕೋಟ್ಯಾಂತರ ರೂಪಾಯಿಗಳ ಹಣದ ಅವ್ಯವಹಾರ ಬಯಲಿಗೆ ಬಂದಿದೆ ಎಂಬ ಮಾಹಿತಿ ತಿಳಿದು ಬಂದಿದೆ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದ್ದು, ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿರುವುದಕ್ಕೆ ಸಾಕ್ಷಿಯಾಗಿದೆ ಬಿ.ವೈ ರಾಘವೇಂದ್ರ ಆರೋಪಿಸಿದ್ದಾರೆ.
ಮಾಡಿದ್ದುಣ್ಣೋ ಮಹಾರಾಯ ಎಂಬ ಸ್ಥಿತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬಂದಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಸದನದಲ್ಲಿ ಅವಕಾಶ ಕೊಡಲೇ ಇಲ್ಲ. ಹೊರಗಡೆಗೆ ಚರ್ಚೆ ಮಾಡಿದ್ದರು. ಹಾಗಾಗಿ ಈ ಸ್ಥಿತಿ ಅವರಿಗೆ ಬಂದಿದ್ದು, ಲೋಕಾಯುಕ್ತ ಮುಂದೆ ತನಿಖೆ ನಡೆಸಬೇಕಾಗಿದೆ. ಆದರೆ, ಅವರು ಪರಿಪೂರ್ಣರಾಗಲು ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post