ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಗೆ ಎರಡು ಬಹುಮಾನದ ಗೌರವ ಸಂದಿದೆ.
9ನೆಯ ತರಗತಿ ವಿದ್ಯಾರ್ಥಿನಿ ಮದಿಹ ಇಬ್ರಾಹಿಂ ಅಂತಾರಾಷ್ಟ್ರೀಯ ಮಟ್ಟದ ಕಟ ಮತ್ತು ಕುಮಟೆ ವಿಭಾಗದಲ್ಲಿ ಪ್ರಥಮ ಹಾಗೂ ರಾಜ್ಯಮಟ್ಟದ ಕುಮಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾಳೆ.

Also read: ಸಾಂಪ್ರದಾಯಿಕ ಉಡುಗೆ ತೊಟ್ಟು ಮಿಂಚಿದ ಎಸ್’ಆರ್’ಎನ್’ಎಂ ಕಾಲೇಜು ವಿದ್ಯಾರ್ಥಿಗಳು: ಹೇಗಿತ್ತು ಸ್ಟೈಲ್?
ವಿದ್ಯಾರ್ಥಿಗಳಲ್ಲಿ ಸೃಜನಶೀಲ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಲು ಹಾಗೂ ಪ್ರಸ್ತುತ ಜಗತ್ತಿಗೆ ಅಗತ್ಯವಿರುವ ಕೌಶಲ್ಯಗಳನ್ನು ಒದಗಿಸಲು ಹಲವಾರು ವೈವಿಧ್ಯಮಯವಾದ ಶಿಕ್ಷಣ ಹಾಗೂ ಶಿಕ್ಷಣದ ಚಟುವಟಿಕೆಗಳನ್ನು ನೀಡುತ್ತಿರುವುದು ಈ ಸಂಸ್ಥೆಯ ವೈಶಿಷ್ಟ್ಯವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post