ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಶಿವಮೊಗ್ಗ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ನ್ಯೂ ಟೌನ್, ಭದ್ರಾವತಿ, ಇನ್ನೋವೆಟರ್ ಕ್ಲಬ್, ಶಿವಮೊಗ್ಗ ಇವರ ಸಹಯೋಗದಲ್ಲಿ ಬಾಲಕಿಯರ ಸರ್ಕಾರಿ ಪ ಪೂ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಜಿ ಎಫ್ ಕುಟ್ರಿಯವರು ವಹಿಸಿದ್ದರು. ನೆಹರು ಯುವ ಕೇಂದ್ರದ ಶೇಕ್ ಹಸೇನ್ ಮತ್ತು ಅವಿನಾಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಸ್ವಾಮಿ ವಿವೇಕಾನಂದರ ಕುರಿತು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಶ್ರೀ ಸುರೇಂದ್ರನಾಯ್ಕ ಸ್ವಾಗತಿಸಿ, ಎಂ.ಆರ್.ತಿಪ್ಪೇಸ್ವಾಮಿ ವಂದಿಸಿದರು. ಭಾಷಣ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
Also read: ಉದ್ಯೋಗ ಆಕಾಂಕ್ಷಿಗಳಿಗೆ ಕುವೆಂಪು ವಿವಿ ಆಶಾಕಿರಣ: ಪ್ರೊ.ಬಿ.ಪಿ. ವಿರಭದ್ರಪ್ಪ ಅಭಿಪ್ರಾಯ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















