No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಾಂತಿ ಕದಡುವಲ್ಲಿ ಈಶ್ವರಪ್ಪನವರದ್ದು ಎತ್ತಿದ ಕೈ: ಕೆಎಸ್‌ಈ ವಿರುದ್ಧ ಸುಂದರೇಶ್ ವಾಗ್ಧಾಳಿ

kalpa News by kalpa News
November 2, 2022
in ಶಿವಮೊಗ್ಗ
0
ಶಾಂತಿ ಕದಡುವಲ್ಲಿ ಈಶ್ವರಪ್ಪನವರದ್ದು ಎತ್ತಿದ ಕೈ: ಕೆಎಸ್‌ಈ ವಿರುದ್ಧ ಸುಂದರೇಶ್ ವಾಗ್ಧಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೆ.ಎಸ್. ಈಶ್ವರಪ್ಪನವರ K S Eshwarappa ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕರು ಬಲಿಯಾಗಬೇಕೊ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ಬಂದಮೇಲೆ ಎಲ್ಲಾ ಧರ್ಮದ ಯುವಕರ ಕೊಲೆಗಳಾಗುತ್ತಿವೆ. ಇದಕ್ಕೆ ಕಾರಣ ಕಾಂಗ್ರೆಸ್ ಎಂದು ಈಶ್ವರಪ್ಪನವರು ಹೇಳುತ್ತಿರುವುದನ್ನು ನೋಡಿದರೆ ಅವರಿಗೆ ನಾಚಿಕೆ ಆಗಬೇಕು. ಶಿವಮೊಗ್ಗವನ್ನೇ ಉದಾಹರಣೆಗೆ ತೆಗೆದುಕೊಂಡರೆ ಅವರ 25 ವರ್ಷದ ರಾಜಕೀಯ ಜೀವನದಲ್ಲಿ ಧರ್ಮಗಳ ನಡುವೆ ಸಂಘರ್ಷ ಹುಟ್ಟುಹಾಕಿರುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ. ಹರ್ಷನ ಕೊಲೆಯನ್ನೂ ರಾಜಕಾರಣಗೊಳಿಸಿದರು. ಅದರ ಲಾಭ ಪಡೆದರು. ನಗರದಲ್ಲಿ ಗಲಾಟೆ ಎಬ್ಬಿಸಿದರು. ಜನಜೀವನವನ್ನು ಅಸ್ತವ್ಯಸ್ತಗೊಳಿಸಿದರು. ಇದೆಲ್ಲವೂ ಅವರ ಅಧಿಕಾರದ ಹಪಾಹಪಿತನವೇ ಆಗಿದೆ ಎಂದರು.
ಬ್ರಿಟಿಷರ ಆಡಳಿತಕ್ಕೂ ಬಿಜೆಪಿಯವರ ಆಡಳಿತಕ್ಕೂ ಯಾವ ವ್ಯತ್ಯಾಸವೂ ಇಲ್ಲ. ಬಡವರ ಹಣ ಕಸಿದು ಉಳ್ಳವರಿಗೆ ನೀಡಿ ದೇಶವನ್ನು ಕೊಳ್ಳೆ ಹೊಡೆದು ಜನರನ್ನು ಸಂಕಷ್ಟಕ್ಕೆ ದೂರಿದ್ದಾರೆ. ಅಭಿವೃದ್ಧಿಯನ್ನು ಇಟ್ಟುಕೊಂಡು ಮತ ಕೇಳುವುದನ್ನು ಬಿಟ್ಟು ಧರ್ಮ ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದು ಅಧರ್ಮದ ದಾರಿ ತುಳಿಯುತ್ತಿದ್ದಾರೆ. ಈಶ್ವರಪ್ಪನವರೇ ಸಾಕು. ಧರ್ಮಗಳ ನಡುವೆ ಬೆಂಕಿ ಹಚ್ಚಲು. ಇನ್ನೇನು ನಗರದಲ್ಲಿ ಶಾಂತಿ ಸ್ಥಾಪನೆ ಆಗುತ್ತದೆ ಎಂದರೆ ಸಾಕು ಕೆಲಸಕ್ಕೆ ಬಾರದ ವಿಷಯ ಮುಂದಿಟ್ಟುಕೊಂಡು ಶಾಂತಿ ಕದಡುವಲ್ಲಿ ಈಶ್ವರಪ್ಪನವರದ್ದು ಎತ್ತಿದ ಕೈ ಎಂದರು.

ಬಿಜೆಪಿಯವರಿಗೆ ಸಾವರ್ಕರ್ ಇಷ್ಟು ವರ್ಷ ಗೊತ್ತಿರಲಿಲ್ಲವೇ .ಈಗ ಒಬ್ಬಸಾಮಾನ್ಯ ಮನುಷ್ಯನನ್ನು ವಿಜೃಂಭಿಸುವ ಅವಶ್ಯಕತೆಯಾಧರೂ ಏನಿದೆ ಅದರಲ್ಲೂ ಈಶ್ವರಪ್ಪನವರು ಅವರ ಮೊಮ್ಮಗನನ್ನು ಕರೆಸುವ ಅವಶ್ಯತೆ ಇತ್ತೇ. ಈ ದೇಶದ ಸ್ವಾತಂತ್ರ್ಯಕ್ಕಾಗಿ ಕೋಟಿ ಜನರು ಹೋರಾಡಿದ್ದಾರೆ. ಅವರ ಮೊಮ್ಮಕ್ಕಳಿಲ್ಲವೇ. ಮಕ್ಕಳಿಲ್ಲವೇ, ನಿಜವಾಗಿಯೂ ಈಶ್ವರಪ್ಪನವರಿಗೆ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಪ್ರೀತಿ ಇದ್ದರೆ, ಶಿಕಾರಿಪುರ ತಾಲೂಕಿನ ಈಸೂರಿಗೆ ಹೋಗಲಿ ಅಲ್ಲಿ ಹೋರಾಟಗಾರರ ವಂಶವೇ ಇದೆ ಎಂದು ಟೀಕಿಸಿದರು.

ಬಿ.ಎಸ್. ಯಡಿಯೂರಪ್ಪನವರನ್ನು ನೋಡಿ ಈಶ್ವರಪ್ಪ ಕಲಿಯಬೇಕು. ಯಡಿಯೂರಪ್ಪನವರು ಬಿಜೆಪಿಯವರೇ. ಆದರೆ ಧರ್ಮಗಳ ನಡುವೆ ಅವರೆಂದೂ ಶಾಂತಿ ಕದಡುವಂತ ಮಾತುಗಳನ್ನು ಆಡುವುದಿಲ್ಲ. ಅಭಿವೃದ್ಧಿಗೆ ಶ್ರಮಿಸುತ್ತಾರೆ. ಆದರೆ ಈ ಈಶ್ವರಪ್ಪ ಧರ್ಮವನ್ನು ಮೈಮೇಲೆ ಹೊತ್ತುಕೊಂಡಂತೆ ಅಧಿಕಾರಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ಇಟ್ಟುಕೊಂಡು 60 ವರ್ಷಕ್ಕೆ ಅರಳುಮರಳು ಎಂಬಂತೆ ವರ್ತಿಸುತ್ತಿದ್ದಾರೆ ಎಂದರು.
ಖರ್ಗೆ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 15 ಸಾವಿರ ಕಾರ್ಯಕರ್ತರು ಭಾಗಿ:
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಮಲ್ಲಿಕಾರ್ಜು ಖರ್ಗೆಯವರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ.6ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಂದು ಕಾಂಗ್ರೆಸ್ ಉಸ್ತುವಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಯ್ಯದ್ ಅಹ್ಮದ್ ಹೇಳಿದರು.

ಖರ್ಗೆಯವರು 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿ ಕೆಲಸ ಮಾಡಿದ್ದಾರೆ. ಎಲ್ಲಾ ಹುದ್ದೆಗಳಲ್ಲೂ ಸೇವೆ ಸಲ್ಲಿಸಿದ್ದಾರೆ. 9 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ ಎಂದರು.
ಬಿಜೆಪಿಯವರು ಸದಾ ಆರೋಪ ಮಾಡುತ್ತಲೇ ಇದ್ದರೂ ಅಧ್ಯಕ್ಷ ಪದವಿ ನೆಹರು ಕುಟುಂಬಕ್ಕೆ ಮಾತ್ರ ಎಂದು. ಆದರೆ ಈ ಆರೋಪವನ್ನು ಖರ್ಗೆಯವರು ಚುನಾವಣೆಯ ಮೂಲಕ ಆಯ್ಕೆಯಾಗಿ ಸುಳ್ಳು ಎಂದು ಸಾಬೀತುಪಡಿಸಿದ್ದಾರೆ. ಅವರ ಸ್ವಾಗತ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷಕ್ಕು ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದಲೂ ಕೂಡ 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರೇಖಾ ರಂಗನಾಥ್, ಸಿ.ಎಸ್.ಚಂದ್ರಭೂಪಾಲ್, ಚಂದ್ರಶೇಖರ್, ಮುಜೀಬ್, ಚಂದನ್, ಖಲೀಂಪಾಷಾ, ಎನ್.ಡಿ. ಪ್ರವೀಣ್ಕುಮಾರ್ ಮುಂತಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: K S EshwarappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಸ್ತೆ ಅಗಲೀಕರಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶಾಸಕ ಹಾಲಪ್ಪರಿಗೆ ಸ್ಥಳೀಯರ ಮನವಿ

Next Post

“ಆರೋಗ್ಯ ಭವನ” ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

kalpa News

kalpa News

Next Post
“ಆರೋಗ್ಯ ಭವನ” ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

"ಆರೋಗ್ಯ ಭವನ" ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL