ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಸಾಕಷ್ಟು ರಾಷ್ಟ್ರಭಕ್ತರು ಶ್ರಮಪಟ್ಟಿದ್ದಾರೆ. ಸ್ವಾತಂತ್ರ್ಯ ಬಂದ ನಂತರ ಹುಟ್ಟಿದವರು ಸಿದ್ಧರಾಮಯ್ಯ. ಸ್ವಾಂತತ್ರ್ಯ ಸಂಗ್ರಾಮಕ್ಕೂ ಸಿದ್ಧರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಟ್ಟಿನಲ್ಲಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೈಕ್‌ರ್‍ಯಾಲಿಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಷ್ಟ್ರಭಕ್ತ, ರಾಷ್ಟ್ರಧ್ವಜದ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡುತ್ತಿರುವುದು ವಿಷಾಧದ ಸಂಗತಿ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿದವರು ಸಿದ್ಧರಾಮಯ್ಯ. ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿ ಜೈಲಿಗೆ ಹೋಗಿದ್ದರು. ಜೈಲಿಂದ ಹೊರಬಂದ ನಂತರವೂ ಸಮಾಜವಾದಿ, ಜೆಡಿಎಸ್ ಪಕ್ಷಗಳಿಗೆಲ್ಲಾ ಸೇರ್ಪಡೆಯಾಗಿ ಎಲ್ಲಿಯೂ ನೆಲೆಯೂರದೆ ಹೊರಬಂದಿದ್ದಾರೆ ಎಂದು ಸಿದ್ಧರಾಮಯ್ಯ ಅವರ ಬಗ್ಗೆ ಲೇವಡಿ ಮಾಡಿದರು.
ಕಾಂಗ್ರೆಸ್ ಪಕ್ಷಕ್ಕೂ ಸ್ವಾತಂತ್ರ್ಯ ಹೋರಾಟಗಾರರಿಗೂ ಯಾವುದೇ ಸಂಬಂಧವಿಲ್ಲ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕರು ಡಾ. ಕೇಶವ ಬಲಿರಾಮ ಹೆಡ್ಗೆವರ್ ಅವರು ಕಾಂಗ್ರೆಸ್‌ನಲ್ಲಿದ್ದರು ಎಂದು ತಿಳಿಸಿದರು.
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ರಾಷ್ಟ್ರಪ್ರೇಮ ಜಾಗೃತಿಗೊಳಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರಭಕ್ತರ ನೆನಪಿಗಾಗಿ ಇಂದು ನಗರದಲ್ಲಿ ಬೈಕ್ ರ್‍ಯಾಲಿ ನಡೆಸಲಾಯಿತು. ರ್‍ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿರುವುದು ಹೆಮ್ಮೆಯ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post