ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚಿನ ದಿನಗಳಲ್ಲಿ ಗರ್ಭಕಂಠ ಮತ್ತು ಸ್ಥನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಮಹಿಳೆಯರು ಆರೋಗ್ಯದ ಕುರಿತಾಗಿ ಹೆಚ್ಚಿನ ಕಾಳಜಿವಹಿಸುವ ಅಗತ್ಯವಿದೆ ಎಂದು ಸರ್ಜಿ ಆಸ್ಪತ್ರೆ ನಿರ್ದೇಶಕಿ ನಮಿತಾ ಸರ್ಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರ ನೆಹರು ಕ್ರೀಡಾಂಗಣದಲ್ಲಿ ಜೈನ್ ಪಬ್ಲಿಕ್ ಶಾಲೆ, ಡೆಕಾಥ್ಲಾನ್, ಸರ್ಜಿ ಆಸ್ಪತ್ರೆ, ನಾರಾಯಣ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್, ವಿ ಡಿಸೈನ್, ರೋಟರಿ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಫೆಮಥಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಹಿಳೆರ ಆರೋಗ್ಯದ ಬಗ್ಗೆ ಉಪಯುಕ್ತ ಮಾಹಿತಿ ನೀಡಲಾಯಿತು. ನೆಹರು ಕ್ರೀಡಾಂಗಣದಿಂದ ಆರಂಭಗೊಂಡ ಫೆಮಥಾನ್, ಕೋರ್ಟ್ ಸರ್ಕಲ್, ಗೋಪಿ ವೃತ್ತ – ಜೈಲ್ ಸರ್ಕಲ್ ಮೂಲಕ ಹಾದು ನಾರಾಯಣ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ಶಿವಮೂರ್ತಿ ವೃತ್ತ ದಲ್ಲಿ ಮುಕ್ತಾಯಗೊಂಡಿತು. 300ಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇವರಿಗೆ ಟಿ-ಶರ್ಟ್ ಮತ್ತು ಕ್ಯಾಪನ್ನು ಜೈನ್ ಪಬ್ಲಿಕ್ ಶಾಲೆ ವತಿಯಿಂದ ಉಚಿತವಾಗಿ ವಿತರಿಸಲಾಯಿತು ಫೇಮಥಾನ್ ನಲ್ಲಿ ಪಾಲ್ಗೊಂಡ ಸ್ಪರ್ಧಿಗಳಿಗೆ ವಯೋಮಿತಿ 24ರ ಒಳಗೆ, 25ರ ಮೇಲೆ, 50ರ ಮೇಲೆ ಸ್ಪರ್ಧಿಗಳಿಗೆ ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನವನ್ನು ವಿತರಿಸಲಾಯಿತು.
ಫೇಮಥಾನ್ ನಲ್ಲಿ ಸಂಗ್ರಹವಾದ ಹಣವನ್ನು ಕ್ಯಾನ್ಸರ್ ನಿಂದ ಬಳಲುತ್ತಿರುವ ರೋಗಿಗಳಿಗೆ ನೀಡಲಾಯಿತು. ಒಂದು ಒಳ್ಳೆಯ ಉದ್ದೇಶಕ್ಕೆ ಕೈ ಜೋಡಿಸಿದ ಪ್ರತಿಯೊಬ್ಬರಿಗೂ ಜೈನ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಧನ್ಯವಾದವನ್ನು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post