ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಾವು ಕೈಗೊಂಡ ಕೆಲಸಗಳು ತೃಪ್ತಿತಂದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಮ್. ಶಾಂತರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಪ್ರತಿ ತಾಲೂಕು ಸಹ ವಿಭಿನ್ನವಾದ ಊರುಗಳಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸರಾಗವಾಗಿ ಕಾಪಾಡಿಕೊಂಡು ಬಂದಿದ್ದೇವೆ ಎಂದು ಹೇಳಿದರು.
ತಾವು ವರ್ಗಾವಣೆ ಕೋರಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಮ್ಮನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಯಾವುದೇ ಒತ್ತಡಗಳಿಲ್ಲ. ಶಿವಮೊಗ್ಗ ಜಿಲ್ಲಾ ಎಸ್‌ಪಿಯಾಗಿ 20 ತಿಂಗಳು ಸೇವೆ ಸಲ್ಲಿಸಿದ್ದು ತೃಪ್ತಿಕರವಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post