ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೂರು ಬಾರಿ ಸಂಸದರಾದ ಅವಧಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ರೈಲ್ವೇ, ರನ್ವೇ ಹಾಗೂ ಹೈವೇ ಮೂರು ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಅವಧಿಯಲ್ಲಿ ಮತ್ತಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಲು ಈಬಾರಿಯೂ ಮತ್ತಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಲು ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ನನಗೆ ಹೆಚ್ಚಿನ ಬೆಂಬಲ ನೀಡಬೇಕೆಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.
ಭಾನುವಾರ ಬೆಳಿಗ್ಗೆ ತಾಳಗುಪ್ಪದಿಂದ ಬೆಂಗಳೂರಿಗೆ ಹೋಗುವ ಇಂಟರ್ಸಿಟಿ ರೈಲಿನಲ್ಲಿ ಪ್ರಯಾಣಿಕರನ್ನು ಭೇಟಿ ಮಾಡಿ ತಮ್ಮ ಸಾಧನೆಯ ಸಮಗ್ರ ಪ್ರತಿಯನ್ನು ಪ್ರಯಾಣಿಕರಿಗೆ ನೀಡುವ ಮೂಲಕ ಮತಯಾಚಿಸಿದರು. ಕೇಂದ್ರ ಸರ್ಕಾರದಿಂದ ಸಾಕಷ್ಟು ಅಭಿವೃದ್ದಿ ಯೋಜನೆಗಳನ್ನು ತರುವ ಗುರಿ ಹೊಂದಿದ್ದೇನೆ. ಇದು ಕೇವಲ ಟ್ರೈಲರ್ ಮಾತ್ರ ಇನ್ನೂ ಪಿಕ್ಚರ್ ಬಾಕಿಯಿದೆ. ಅದನ್ನು ನಿಮ್ಮೆಲ್ಲರ ಆಶೀರ್ವಾದದಿಂದ ಪೂರೈಸುತ್ತೇನೆ ಎಂಬ ವಿಶ್ವಾಸವಿದೆ ಎಂದರು.

Also read: ಗೃಹಲಕ್ಷ್ಮೀ ಬೇಡ, ಮನೆಯ ಮಹಾಲಕ್ಷ್ಮಿ ಉಳಿಸಿ
ನಂತರ ಬಿ.ವೈ. ರಾಘವೇಂದ್ರರವರು ಭದ್ರಾವತಿ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿರುವ ವಿಶ್ವೇಶ್ವರಯ್ಯ ಪುತ್ತಳಿಗೆ ಮಾಲಾರ್ಪಣೆ ಮಾಡಿ ಅಲ್ಲಿ ನೆರೆದಿದ್ದ ಮತದಾರ ಜನರನ್ನು ಸಂಪರ್ಕಿಸಿ ಮತ ನೀಡುವಂತೆ ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post