ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವತಿಯಿಂದ ನಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಶಾಲೆ 13ನೇ ವಾರ್ಷಿಕ ಕ್ರೀಡಾಕೂಟ ಅದ್ದೂರಿ ಹಾಗೂ ಶಿಸ್ತಿನಿಂದ ನಡೆಯಿತು.
ಸೀನಿಯರ್ ನ್ಯಾಷನಲ್ ವಾಲಿಬಾಲ್ ಆಟಗಾರ ಅಭಿಜಿತ್ ರವರು ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕ್ರೀಡೆ ಜೀವನದ ಅಗತ್ಯವಾದ ಶಿಸ್ತು, ತಂಡಭಾವ ಮತ್ತು ಆರೋಗ್ಯದ ಮಹತ್ವದ ಬಗ್ಗೆ ಪ್ರೇರಣಾದಾಯಕವಾಗಿ ನುಡಿಗಳನ್ನಾಡಿದರು.

ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಪೋಷಕರು ಸಹ ಪಾಲ್ಗೊಂಡು ಕ್ರೀಡಾಕೂಟವು ಯಶಸ್ವಿಯಾಗಿ ಪೂರ್ಣಗೊಂಡಿತು.
ಈ ವೇಳೆ ಮಾತನಾಡಿದ ಪ್ರಾಂಶುಪಾಲರಾದ ಪ್ರಿಯದರ್ಶಿನಿ, ವಿದ್ಯಾರ್ಥಿಗಳ ಈ ಜಯದಿಂದ ಶಾಲೆಯ ಕೀರ್ತಿ ಮತ್ತಷ್ಟು ಹೆಚ್ಚಾಗಿದೆ. ಮುಂದಿನ ಸ್ಪರ್ಧೆಗಳಲ್ಲೂ ಇದೇ ಉತ್ಸಾಹದಿಂದ ಭಾಗವಹಿಸಿ, ಕೀರ್ತಿಯನ್ನು ತರುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಜೆಜಿಐನ ಮುಖ್ಯ ಕಾರ್ಯನಿರ್ವಾಹಕ ಶರತ್ ಕುಮಾರ್, ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಆರ್. ಸುಮಂತ್ ಹಾಗೂ ಸೌಲಭ್ಯ ವ್ಯವಸ್ಥಾಪಕರಾದ ವಿಜಯಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post