ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರದ 5ನೇ ಗ್ಯಾರಂಟಿಯಾದ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯ ಉದ್ಘಾಟನೆ ಸಮಾರಂಭ ಶಿವಮೊಗ್ಗದ ಫ್ರೀಪಾಡಂ ಪಾರ್ಕ್‍ನಲ್ಲಿ ಜ.12ರ ಬೆಳಿಗ್ಗೆ 11ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯುವನಿಧಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಮಧು ಬಂಗಾರಪ್ಪ, ಡಾ.ಶರಣಪ್ರಕಾಶ್ ಪಾಟೀಲ್, ಡಾ.ಎನ್.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಂದ ಸುಮಾರು 1ಲಕ್ಷಕ್ಕೂ ಹೆಚ್ಚು ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮತ್ತು ಸಾರ್ವಜನಿಕರು ಹಾಗೂ ಯುವಕರು ಭಾಗವಹಿಸಲಿದ್ದಾರೆ ಎಂದರು.

Also read: ಶಿಮೂಲ್ ಎದುರು ರಸ್ತೆಗೆ ಹಾಲು ಸುರಿದು ಹಾಲು ಉತ್ಪಾದಕರು ಪ್ರತಿಭಟಿಸಿದ್ದೇಕೆ?
ಪ್ರಧಾನ ಮಂತ್ರಿಗಳು ವರ್ಷಕ್ಕೆ 10 ಸಾವಿರ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ, 10 ಸಾವಿರ ಉದ್ಯೋಗ ಸೃಷ್ಠಿ ಮಾಡುವುದಿರಲಿ, ಇರುವ ಉದ್ಯೋಗವನ್ನು ಕಸಿದುಕೊಂಡಿದ್ದಾರೆ. ರಾಜ್ಯ ಸರ್ಕಾರ ಈಗ ನಿರುದ್ಯೋಗಿಗಳಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ತಂದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಿಂದ ದೂರ ಸರಿಯುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಎಸ್.ಟಿ.ಚಂದ್ರಶೇಖರ್, ಪ್ರಮುಖರಾದ ಕಲೀಂ ಪಾಶಾ, ಮಂಜುನಾಥ್ ಬಾಬು, ಮಧು ಹೆಚ್.ಎಂ., ಎನ್.ಡಿ.ಪ್ರವೀಣ್‍ಕುಮಾರ್, ಗಿರೀಶ್ ರಾವ್, ಅಫ್ರೀದಿ, ಚಂದನ್ ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post