ಬೆಂಗಳೂರು: ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ಬಹುವರ್ಷಗಳ ಬೇಡಿಕೆಯಾಗಿದ್ದ ಜನಶತಾಬ್ದಿ ಸೂಪರ್ ಫಾಸ್ಟ್ ರೈಲಿಗೆ ಇಂದು ಸಂಸದ ಬಿ.ವೈ. ರಾಘವೇಂದ್ರ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ಸಂಸದ ಬಿ.ವೈ. ರಾಘವೇಂದ್ರ ಅವರ ನಿರಂತರ ಪ್ರಯತ್ನದಿಂದಾಗಿ ಮಲೆನಾಡಿಗೆ ದೊರೆತಿರುವ ರೈಲಿಗೆ ಚಾಲನೆ ದೊರೆತಿರುವುದು ಇಂದಿನ ದಿನವನ್ನು ಜಿಲ್ಲೆಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂತಹದ್ದಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ಶಾಸಕ ಆಯನೂರು ಮಂಜುನಾಥ್ ಮತ್ತು ರೈಲ್ವೆ ಅಧಿಕಾರಿಗಳು ಹಾಗೂ ಗಣ್ಯರ ಉಪಸ್ಥಿತರಿದ್ದು ಭದ್ರಾವತಿಯವರೆಗೆ ರೈಲಿನಲ್ಲಿ ಸಂಚರಿಸಿದರು.
ಇನ್ನು, ರೈಲಿಗೆ ಅಧಿಕೃತವಾಗಿ ಚಾಲನೆ ನೀಡುವ ವೇಳೆ ನಿಲ್ದಾಣದ ತುಂಬೆಲ್ಲಾ ಭಾರತ್ ಮಾತಾಕಿ ಜೈ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈ ಎಂಬ ಘೋಷಣೆಗಳನ್ನು ಸಾರ್ವಜನಿಕರು ಕೂಗುತ್ತಿದ್ದುದು ವಿಶೇಷವಾಗಿತ್ತು.
Discussion about this post