No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೆಸಿಐ ಶಿವಮೊಗ್ಗ ವಿವೇಕ್ ಆಶ್ರಯದಲ್ಲಿ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ವೈಭವ

kalpa News by kalpa News
August 25, 2026
in ಶಿವಮೊಗ್ಗ
0
shivamogga-jci-vivek-cheluve-chitravati-yakshagana

Representational Image Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ಪ್ರಸಂಗವು ಸಾವಿರಾರು ಯಕ್ಷಗಾನ ಕಲಾಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.

ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ 2026ನೇ ಸಾಲಿನ ಅಧ್ಯಕ್ಷೆ ಜೆಸಿ ವಿಜಯಲಕ್ಷ್ಮಿ ಯು. ಕದಂಬ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವು ಯಕ್ಷಗಾನ ಪ್ರೇಮಿಗಳಿಗೆ ಸಾಂಸ್ಕೃತಿಕ ಹಬ್ಬದ ವಾತಾವರಣವನ್ನು ಮೂಡಿಸಿತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಬಾಲರಾಜ್, ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಂಘಟಿತ ಪ್ರಯತ್ನದಿಂದ ಕಾರ್ಯಕ್ರಮ ಯಶಸ್ಸಿನ ಮೆಟ್ಟಿಲೇರಿತು.

ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಯಕ್ಷಗಾನ ಅಭಿಮಾನಿಗಳು ಹಾಗೂ ಕಲಾಪೋಷಕರು ‘ಚೆಲುವೆ ಚಿತ್ರಾವತಿ’ ಯಕ್ಷಗಾನ ಪ್ರದರ್ಶನವನ್ನು ಆಸ್ವಾದಿಸಿದರು. ಕಾರ್ಯಕ್ರಮಕ್ಕೆ ದೊರೆತ ಅಭೂತಪೂರ್ವ ಸ್ಪಂದನೆ ಶಿವಮೊಗ್ಗದಲ್ಲಿ ಯಕ್ಷಗಾನ ಸೇರಿದಂತೆ ಸಾಂಪ್ರದಾಯಿಕ ಕಲಾಪ್ರಕಾರಗಳ ಬಗ್ಗೆ ಇರುವ ಅಭಿಮಾನಕ್ಕೆ ಸಾಕ್ಷಿಯಾಯಿತು.PES Shivamogga

ಆಧುನಿಕ ರಂಗಮಂದಿರದ ಅಗತ್ಯವಿದೆ: ಉದಯ ಕದಂಬ

ಕಾರ್ಯಕ್ರಮದ ಸಭಾ ಭಾಗದಲ್ಲಿ ಮಾತನಾಡಿದ ಸಂಸ್ಥೆಯ ಪೂರ್ವಾಧ್ಯಕ್ಷ ಉದಯ ಕದಂಬ, ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಿರಂತರವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಮಲೆನಾಡಿನ ಕಲಾಭಿಮಾನಿಗಳು, ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಹವಾ ನಿಯಂತ್ರಿತ ವ್ಯವಸ್ಥೆ ಸೇರಿದಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತ ಹಾಗೂ ಭವ್ಯ ರಂಗಮಂದಿರ ನಿರ್ಮಾಣವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಶಿವಮೊಗ್ಗವು ಸಾಂಸ್ಕೃತಿಕವಾಗಿ ಶ್ರೀಮಂತವಾದ ನಗರವಾಗಿದ್ದು, ಯಕ್ಷಗಾನ, ನಾಟಕ, ಸಂಗೀತ ಸೇರಿದಂತೆ ವಿವಿಧ ಕಲಾ ಕಾರ್ಯಕ್ರಮಗಳಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

ಯುವಜನರ ವ್ಯಕ್ತಿತ್ವ ವಿಕಸನದಲ್ಲಿ ಜೆಸಿಐ ಪಾತ್ರ ಶ್ಲಾಘನೀಯ

ಜೆಸಿಐ ವಲಯ-24ರ ವಲಯಾಧ್ಯಕ್ಷ ಮಧುಸೂದನ ನಾವಡ ಮಾತನಾಡಿ, ಯುವಜನರಲ್ಲಿ ನಾಯಕತ್ವ ಗುಣ, ವ್ಯಕ್ತಿತ್ವ ವಿಕಸನ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಜೆಸಿಐ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಜೆಸಿಐ ಮೂಲಕ ಯುವಜನರಿಗೆ ಕೇವಲ ವ್ಯಕ್ತಿತ್ವ ವಿಕಸನವಷ್ಟೇ ಅಲ್ಲದೆ, ಸಮಾಜದ ಅಭಿವೃದ್ಧಿಗೆ ಕೈಜೋಡಿಸುವ ಮನೋಭಾವವನ್ನು ಬೆಳೆಸಲಾಗುತ್ತಿದೆ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಕಲಾ ಪ್ರಜ್ಞೆ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಸಹಕಾರಿಯಾಗುತ್ತವೆ ಎಂದರು.Kumadvathi College Shikariura

ಸಂಚಾರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ದೇವರಾಜ್‌ಗೆ ಸನ್ಮಾನ

ಇದೇ ಸಂದರ್ಭದಲ್ಲಿ ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ದೇವರಾಜ್ ಟಿ.ವಿ. ಅವರನ್ನು ಸಮಾಜಮುಖಿ ಸೇವೆ ಹಾಗೂ ಕರ್ತವ್ಯನಿಷ್ಠೆಗಾಗಿ ಜೆಸಿಐ ಶಿವಮೊಗ್ಗ ವಿವೇಕ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Also read>> ಮಹಿಳೆಯರು ಎಲ್ಲಾ ಯೋಗ ಪ್ರಕ್ರಿಯೆಗಳನ್ನು ಮಾಡಬಾರದು ಏಕೆ? ರಾಘವೇಶ್ವರ ಶ್ರೀಗಳು ಹೇಳಿದ್ದೇನು?

ಕಾರ್ಯಕ್ರಮದಲ್ಲಿ ಜೆಸಿಐ ವಲಯ ಉಪಾಧ್ಯಕ್ಷ ಗಣೇಶ್ ಪೈ, ವೀರಶೈವ ಸಮಾಜದ ಅಧ್ಯಕ್ಷ ಜ್ಯೋತಿಪ್ರಕಾಶ್, ಕೆ.ವಿ. ವಸಂತ್ ಕುಮಾರ್, ನ್ಯಾಯಾಂಗ ಕ್ಷೇತ್ರದ ಗಣ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

‘ಕಾಟನ್ ಜಾವಾ ವರ್ಲ್ಡ್’ ಸಂಸ್ಥೆಯ ಕಾಟನ್ ಜಗದೀಶ್ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ ಸಭಿಕರ ಮೆಚ್ಚುಗೆಗೆ ಪಾತ್ರರಾದರು.

ಕಲೆ, ಸಂಸ್ಕೃತಿ ಹಾಗೂ ಯುವಜನರ ವ್ಯಕ್ತಿತ್ವ ವಿಕಸನಕ್ಕೆ ನಿರಂತರವಾಗಿ ಬದ್ಧವಾಗಿರುವ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಈ ಪ್ರಯತ್ನವು ಶಿವಮೊಗ್ಗದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮತ್ತೊಂದು ಸ್ಮರಣೀಯ ಅಧ್ಯಾಯವಾಗಿ ದಾಖಲಾಗಿದೆ.

2,000ಕ್ಕೂ ಹೆಚ್ಚು ಆಸನ ಸಾಮರ್ಥ್ಯದ ಆಧುನಿಕ ರಂಗಮಂದಿರಕ್ಕೆ ಈಶ್ವರಪ್ಪ ಭರವಸೆ

ಶಿವಮೊಗ್ಗದ ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾಗುವಂತೆ 2,000ಕ್ಕೂ ಹೆಚ್ಚು ಆಸನ ಸಾಮರ್ಥ್ಯ ಹೊಂದಿರುವ ಸುಸಜ್ಜಿತ ಹಾಗೂ ಆಧುನಿಕ ರಂಗಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದ್ದಾರೆ.

ಸುಸಜ್ಜಿತ ಹಾಗೂ ಆಧುನಿಕ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಮನವಿಗೆ ಸ್ಪಂದಿಸಿದ ಅವರು, ಮುಂದಿನ ದಿನಗಳಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಘೋಷಣೆಯು ಮಲೆನಾಡಿನ ಕಲಾಭಿಮಾನಿಗಳು ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ಹೊಸ ನಿರೀಕ್ಷೆಯನ್ನು ಮೂಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Cheluve chitravati YakshaganaJCIShivamoggaಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಿಳೆಯರು ಎಲ್ಲಾ ಯೋಗ ಪ್ರಕ್ರಿಯೆಗಳನ್ನು ಮಾಡಬಾರದು ಏಕೆ? ರಾಘವೇಶ್ವರ ಶ್ರೀಗಳು ಹೇಳಿದ್ದೇನು?

Next Post

‘ಟಾಕ್ಸಿಕ್’ ಯಶಸ್ಸಿಗೆ ಮಂಜುನಾಥನ ಮೊರೆ ಹೋದ ಯಶ್ | 15 ನಿಮಿಷ ವಿಶೇಷ ಪ್ರಾರ್ಥನೆ

kalpa News

kalpa News

Next Post
Rocking Star Yash Visit Dharmasthala Prays for Toxic Success

‘ಟಾಕ್ಸಿಕ್’ ಯಶಸ್ಸಿಗೆ ಮಂಜುನಾಥನ ಮೊರೆ ಹೋದ ಯಶ್ | 15 ನಿಮಿಷ ವಿಶೇಷ ಪ್ರಾರ್ಥನೆ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL