ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆಎನ್‌ಎನ್‌ಸಿ ಎಂಜಿನಿಯರಿಂಗ್ JNNC Engineering College ಕಾಲೇಜಿನ ವಿದ್ಯಾರ್ಥಿಗಳು 2020-21ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ VTU ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದಿದ್ದಾರೆ.
ಇನ್ಫಾರ್ಮೇಶನ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿನಿ ಪಿ. ಪಲ್ಲವಿ ವಿಟಿಯು ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ರಾಜ್ಯದಲ್ಲಿಯೇ ಪ್ರಥಮ ರ್ಯಾಂಕ್ ಪಡೆದಿದ್ದು ವಿಟಿಯು ಬಂಗಾರದ ಪದಕ ಪಡೆದಿದ್ದಾರೆ. ಇದರೊಂದಿಗೆ ಆರ್.ಎನ್.ಶೆಟ್ಟಿ ಬಂಗಾರದ ಪದಕ, ಮಂಗಳ ಮತ್ತು ಅನಂತರಾಮನ್ ಬಂಗಾರದ ಪದಕವನ್ನು ಪಡೆದಿದ್ದಾರೆ.
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ ಎಂ.ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ಸ್ನಾತಕೊತ್ತರ ಪದವಿ ಪರೀಕ್ಷೆಯಲ್ಲಿ ಮಮತಾ.ಜಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.
ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಎಂ.ಟೆಕ್ ಟ್ರಾನ್ಸ್‌ಪೋರ್ಟೇಷನ್ ಮತ್ತು ಮ್ಯಾನೇಜ್ಮೆಂಟ್ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಮಧುಮೂರ್ತಿ.ಬಿ.ಎಸ್ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.
ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಜೆ.ಎನ್.ಎನ್.ಸಿ.ಇ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post