ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜು ಹಾಗೂ ಎಥ್ನೊಟೆಕ್ ಅಕಾಡೆಮಿಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಯಿತು.
ಇದರಿಂದಾಗಿ ಪ್ರತಿಷ್ಠಿತ ಕಂಪನಿಗಳ ಅವಶ್ಯಕತೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಕೌಶಲ್ಯಾಧಾರಿತ ಉನ್ನತಿ ಪಡೆಯಲು ಸಾಧ್ಯವಾಗಲಿದ್ದು ಅಗತ್ಯ ತರಬೇತಿಯ ಮೂಲಕ ಗ್ಲೋಬಲ್ ಸರ್ಟಿಫಿಕೇಷನ್ ಪಡೆಯಬಹುದಾಗಿದೆ. ಈ ಸರ್ಟಿಫಿಕೇಟ್ ಮೂಲಕ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗವಕಾಶ ಪಡೆಯಲು ಪೂರಕ ವೇದಿಕೆಯಾಗಿ ಸ್ಪಂದಿಸಲಿದೆ. ಜೊತೆಗೆ ಅಂತರಾಷ್ಟ್ರೀಯ ಕಂಪನಿಗಳು ಹಾಗೂ ಕಾಲೇಜಿನೊಂದಿಗೆ ಸಂಪರ್ಕ ಕಲ್ಪಿಸಲಿದೆ.
ಎಥ್ನೊಟೆಕ್ ಅಕಾಡೆಮಿ ಮುಖ್ಯ ಶೈಕ್ಷಣಿಕ ಸಲಹೆಗಾರರಾದ ಪ್ರೋ.ಸಂಗಮೇಶ್ವರ, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರ ಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	





 Loading ...
 Loading ... 
							



 
                
Discussion about this post