ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ #JNNEngineering College ಬೈಟ್ ಬ್ರಿಗೇಡ್ ಕ್ಲಬ್ ವತಿಯಿಂದ ಹ್ಯಾಕ್‌ಫೆಸ್ಟ್ 1.0 – ದ ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ #Hackfest 1.0 Ultimate Coding Challenge ಕಾರ್ಯಕ್ರಮವನ್ನು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ವಿವಿಧ ಕಾಲೇಜುಗಳ ಸುಮಾರು 150 ತಂಡಗಳ 600 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ, ತಮ್ಮ ನವೀನ ತಾಂತ್ರಿಕ ಯೋಜನೆಗಳನ್ನು ನಿರ್ಮಿಸಿ ಪ್ರಸ್ತುತಪಡಿಸಿದರು.
ಅಂತಿಮ ಸುತ್ತಿನಲ್ಲಿ ತಮಿಳುನಾಡಿನ ನಂದಾ ಕಾಲೇಜ್ ಆಫ್ ಟೆಕ್ನಾಲಜಿ ತಂಡ (ಪ್ರಥಮ), ಮೈಸೂರಿನ ಜೆ.ಎಸ್.ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜಿನ ತಂಡ (ದ್ವಿತೀಯ), ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಪ್ ಇಂಜಿನಿಯರಿಂಗ್ ಕಾಲೇಜು (ತೃತೀಯ) ಸ್ಥಾನ ಪಡೆದಿದರು. ಬಹುಮಾನ ವಿಜೇತ ತಂಡಕ್ಕೆ ತಲಾ 30 ಸಾವಿರ, 20 ಸಾವಿರ, 10 ಸಾವಿರ ರೂಪಾಯಿ ಬಹುಮಾನ ನೀಡಿ ಅಭಿನಂದಿಸಲಾಯಿತು.
Also read: ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಪೇಗಾ ಸಂಸ್ಥೆಯ ಹಿರಿಯ ಮೆಷಿನ್ ಲರ್ನಿಂಗ್ ಇಂಜಿನಿಯರ್ ಕಾರ್ತಿಕ್ ಎಲ್. ನಾಗರ್ ಮಾತನಾಡಿ, ಕೃತಕ ಬುದ್ದಿಮತ್ತೆಯು ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಕ್ಷೇತ್ರಕ್ಕೆ ಮಹತ್ವದ ಪಾತ್ರ ವಹಿಸುತ್ತದೆ. ಎಐ ಉಪಕರಣಗಳು ವಿದ್ಯಾರ್ಥಿಗಳಿಗೆ ವೇಗವಾಗಿ ಕಲಿಯಲು, ಹೊಸ ಆಲೋಚನೆಗಳನ್ನು ಅನ್ವೇಷಿಸಲು ಹಾಗೂ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.
ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಹ್ಯಾಕಥಾನ್ ಎಂಬುದು ವಿದ್ಯಾರ್ಥಿಗಳಿಗೆ ತಮ್ಮ ಸೃಜನಶೀಲತೆ, ತಾಂತ್ರಿಕ ಪರಿಣಿತಿ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.
ಎನ್‌ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಬಹುಮಾನ ವಿವರಿಸಿದರು. ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಉಜ್ವಲಾ ಬಿ.ಎಸ್, ಸಂಯೋಜಕರಾದ ಹೃಷಿಕೇಶ್ ಕೆಂಭಾವಿ, ಸಹ ಸಂಯೋಜಕರಾದ ಮಲ್ಲಿಕಾರ್ಜುನ ಎಸ್ ಸಿಂದಿಗೆರೆ ಮತ್ತು ಬೈಟ್ ಬ್ರಿಗೇಡ್ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















