No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

ಸಿದ್ಧಾಂತಬದ್ಧ ಸಹಾನುಭೂತಿಯ ವೃತ್ತಿಪರರ ಅಗತ್ಯವಿದೆ | ಡಾ.ಉಜ್ವಲ‌

kalpa News by kalpa News
April 18, 2026
in ಶಿವಮೊಗ್ಗ
0
ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಂದಿನ ಜಗತ್ತಿಗೆ ಕೇವಲ ಕೌಶಲ್ಯವಂತ ವೃತ್ತಿಪರರು ಮಾತ್ರವಲ್ಲ, ಸಿದ್ಧಾಂತಬದ್ಧ ನಾಯಕರು ಮತ್ತು ಸಹಾನುಭೂತಿಯ ನಾಗರಿಕರ ಅಗತ್ಯವಿದೆ ಎಂದು ಬೆಳಗಾವಿಯ #VisvesvarayaTechnologicalUniversity ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಯು.ಜೆ. ಉಜ್ವಲ‌ ಹೇಳಿದರು.

ನಗರದ ಜೆ‌.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ 2023-25 ನೇ ಸಾಲಿನ ಎಂಬಿಎ, ಎಂಸಿಎ, ಎಂಟೆಕ್ ಸ್ನಾತಕೋತ್ತರ ಪದವಿಧರರ ‘ಗ್ರಾಜುಯೇಷನ್ ಡೇ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Also Read>> ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

ನೀವು ಪಡೆಯುವ ಪದವಿಯು, ಜೀವನದಲ್ಲಿ ಹೊಸ ಅಧ್ಯಾಯವೆಂಬ ಪ್ರಾರಂಭದ ಮುನ್ಸೂಚನೆ. ಬಿಎಂಡಬ್ಲೂ ಅಥವಾ ಮಾರುತಿ ಓಡಿಸಿದರೂ, ರಸ್ತೆ ಎಂಬುದು ಒಂದೇ ಆಗಿರುತ್ತದೆ. ಟೈಟನ್ ಅಥವಾ ರೋಲೆಕ್ಸ್ ಧರಿಸಿದರೂ, ಕಾಲ ಎಂಬುದು ಒಂದೇ ರೀತಿಯಲ್ಲಿ ಸಾಗುತ್ತದೆ ಎಂಬ ವಾಸ್ತವತೆಯನ್ನು ಅರಿಯಿರಿ. ನೀವು ಧರಿಸುವ ಲೇಬಲ್‌ಗಳು ಅಥವಾ ಹೊಂದುವ ಹುದ್ದೆಗಳಿಗಿಂತ, ಅನುಸರಿಸುವ ಮೌಲ್ಯಗಳು ಮತ್ತು ಸೌಜನ್ಯತೆ ಬದುಕಿನ ಉನ್ನತಿಗೆ ಮುಖ್ಯ ಎಂದರು.ಬದುಕಿನ ಯಶಸ್ಸಿನ ಹಾದಿಯಲ್ಲಿ, ನೈತಿಕತೆಯನ್ನು ದಾರಿದೀಪವನ್ನಾಗಿಸಿಕೊಳ್ಳಿ. ಕುತೂಹಲವನ್ನು ನಿರಂತರ ಕಲಿಕೆಯ ಇಂಧನವಾಗಿಸಿಕೊಳ್ಳಿ. ಅನಿಶ್ಚಿತತೆಯ ಸಮಯದಲ್ಲಿ ಧೈರ್ಯವನ್ನು ಬೆಳೆಸಿಕೊಳ್ಳುವ ಮೂಲಕ, ವಿನಯವು ಜೀವನಪೂರ್ಣ ಕಲಿಕೆಯ ನೆನಪಾಗಿ ಉಳಿಯಲಿ ಎಂದು ಹಾರೈಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ #NEP2020 ಅನುಷ್ಠಾನದೊಂದಿಗೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಉನ್ನತ ಶಿಕ್ಷಣದಲ್ಲಿ ಪರಿವರ್ತನಾತ್ಮಕ ಹಂತವನ್ನು ಆರಂಭಿಸಿದೆ. ಇದರಲ್ಲಿ ಪ್ರಮುಖವಾಗಿ ಕೌಶಲ್ಯ ಆಧಾರಿತ ಮತ್ತು ಸಮಗ್ರ #Holistic ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಸಾಮರ್ಥ್ಯಗಳು ಮತ್ತು ಉದ್ಯಮಕ್ಕೆ ಸಂಬಂಧಿಸಿದ ಕೌಶಲ್ಯಗಳನ್ನು ಹೆಚ್ಚಿಸುವತ್ತ ಕೇಂದ್ರಿಕರಿಸಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಬೆಟ್ಟದಷ್ಟು ಜ್ಞಾನಕ್ಕಿಂತ, ಮುಷ್ಟಿಯಷ್ಟು ವಿವೇಕ ಮುಖ್ಯ. ಸಮಾಜಮುಖಿ ಕಾರ್ಯಗಳಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಿ. ಬುದ್ಧಿಯಿರುವವನು ಯುದ್ಧವನ್ನು ಗೆಲ್ಲುತ್ತಾನೆ, ಆದರೆ ಬುದ್ಧಿಯೊಂದಿಗೆ ತಾಳ್ಮೆಯಿರುವವನು ಮನಸ್ಸು ಮತ್ತು ಜಗತ್ತನ್ನು ಗೆಲ್ಲುತ್ತಾನೆ. ಅದೃಷ್ಟ, ಹಣೆಬರಹದ ಹಿಂದೆ ಓಡದೆ, ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ, ಕೌಶಲ್ಯಪೂರ್ಣ, ಸಂಸ್ಕಾಯುತ ನಾಗರೀಕರಾಗಿ ಹೊರಹೊಮ್ಮಿ ಎಂದು ಹೇಳಿದರು. ಎನ್ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಯಶಸ್ಸು ಅತ್ಯಂತ ಮಹತ್ವದ್ದಾಗಿದ್ದು, ಅದಕ್ಕೆ ಯಾವುದೇ ಒಳದಾರಿಗಳಿಲ್ಲ. ನೈತಿಕ ಮೌಲ್ಯಗಳ ಮಾರ್ಗದಲ್ಲಿ ನಡೆಯಿರಿ. ಏಕೆಂದರೆ ನಮ್ಮನ್ನು ನಿಜವಾಗಿ ರಕ್ಷಿಸುವುದು ನಮ್ಮ ನೈತಿಕತೆ ಮಾತ್ರ. ಆ ಮಾರ್ಗದಿಂದ ಕ್ಷಣಕಾಲ ದೂರವಾದಲ್ಲಿ, ನಮ್ಮ ಸಾಧನೆಗಳನ್ನು ಕಳೆದುಕೊಳ್ಳುವ ಅಪಾಯದಲ್ಲಿರುತ್ತೇವೆ ಎಂದು ಹೇಳಿದರು.

ಎನ್ಇಎಸ್ ಚಿನ್ನದ ಪದಕ ಪ್ರದಾನ
ವಿಟಿಯು ವ್ಯಾಪ್ತಿಯ ಎಂಬಿಎ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ.ಜೆ. ಸಾಲೇರ ಅವರಿಗೆ ಎನ್ಇಎಸ್ ಸಂಸ್ಥೆಯ ಅಮೃತಮಹೋತ್ಸವದ ಸ್ಮರಣಾರ್ಥವಾಗಿ ಕೊಡಮಾಡುವ, ಎನ್ಇಎಸ್ ಚಿನ್ನದ ಪದಕ ನೀಡಿ ಅಭಿನಂದಿಸಲಾಯಿತು. ಇದೇ ವೇಳೆ ಎಂಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್ ಪಡೆದ ಸಂಜಯ್.ಎಂ.ವಿ ಅವರನ್ನು ಅತಿಥಿಗಳು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ, ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಸಿ.ಶ್ರೀಕಾಂತ್, ಎಂಸಿಎ ವಿಭಾಗದ ಮುಖ್ಯಸ್ಥರಾದ ಡಾ.ಹೇಮಂತ್ ಕುಮಾರ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ.ಜಲೇಶ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಎಂಸಿಎ ವಿದ್ಯಾರ್ಥಿನಿ ಅನುಶ್ರೀ ಪ್ರಾರ್ಥಿಸಿ, ಸಹ ಪ್ರಾಧ್ಯಾಪಕ ಡಾ.ವಿಕ್ರಮ್.ವಿ ನಿರೂಪಿಸಿದರು‌.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Tags: Graduation DayJNNCEJNNCE PG Graduation DayKannada News WebsiteLatest News KannadaShimogaShivamoggaShivamogga NewsVisvesvaraya Technological Universityಗ್ರಾಜುಯೇಷನ್ ಡೇಚಿನ್ನದ ಪದಕವಿಶ್ವೇಶ್ವರಯ್ಯ ತಾಂತ್ರಿಕ ವಿವಿಶಿವಮೊಗ್ಗ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

Next Post

ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ಸೆಲ್‌’ಗೆ ಶಾಸಕ ವಿನಯ್ ಕುಲಕರ್ಣಿ

kalpa News

kalpa News

Next Post
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ಸೆಲ್‌'ಗೆ ಶಾಸಕ ವಿನಯ್ ಕುಲಕರ್ಣಿ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL