ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಡಿ.28ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರುತ್ತದೆ.













Discussion about this post