ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ #JNNCE ಜು.13ರ ಭಾನುವಾರ ಬೆಳಗ್ಗೆ 10ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಿಇಟಿ/ಕಾಮೆಡ್-ಕೆ #CET/Comed-K ಸೀಟು ಆಯ್ಕೆ ಪ್ರಕ್ರಿಯೆಯನ್ನು ನೇರ ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದ್ದು, ಜೊತೆಯಲ್ಲಿ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗಾವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9632471667 ಸಂಪರ್ಕಿಸಲು ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post