ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಬಂಜಾರ ಸಂಘದ ಸಮುದಾಯ ಭವನದ ನವವಿನ್ಯಾಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಆಗಿದ್ದು ಜುಲೈ 7ರ ಬುಧವಾರ ಬಾಲರಾಜ ಅರಸ್ ರಸ್ತೆಯಲ್ಲಿ ಇದರ ಭೂಮಿಪೂಜೆ ನೆರವೇರಲಿದೆ ಎಂದು ಶಾಸಕ ಕೆ.ಬಿ. ಅಶೋಕ್ ನಾಯ್ಕ್ ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಲಂಬಾಣಿ ಜನಸಂಖ್ಯೆ ಇದೆ. 163 ತಾಂಡಗಳಿವೆ. ಈ ಸಮುದಾಯಕ್ಕೆ ಅನುಕೂಲವಾಗಲು ಸರ್ಕಾರದಿಂದ ಭವನಕ್ಕೆ 4 ಕೋಟಿ ಅನುದಾನ ದೊರೆಯುತ್ತಿದೆ. ಇದರ ಒಟ್ಟು ವೆಚ್ಚ 9 ಕೋಟಿ ಎಂದು ಅಂದಾಜಿಸಲಾಗಿದ್ದು, ಇದರಲ್ಲಿ ದೇಣಿಗೆ ಸಂಗ್ರಹಿಸಿ ಸಮುದಾಯ ನಿರ್ಮಿಸಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ, ಸಚಿವ ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಭೂಮಿಪೂಜೆ ನಡೆಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಪ್ರಭುಚೌಹಾಣ್, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಕುಡಚಿ, ಶಾಸಕ ಆಯನೂರು ಮಂಜುನಾಥ್, ಎಂಎಲ್‌ಸಿ ಎಸ್.ರುದ್ರೇಗೌಡ, ಆರ್. ಪ್ರಸನ್ನ ಕುಮಾರ್, ಮಾಜಿ ಶಾಸಕಿ ಶಾರದಾ ನಾಯ್ಕ ಇನ್ನಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















